ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಎರಡು ಹೊಸ ತಂಡಗಳಾದ ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಪದಾರ್ಪಣೆ ಮಾಡಿವೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.
ಬಳಿಕ ಮೊಹಮ್ಮದ್ ಶಮಿ ಎಸೆದ ಮೊದಲ ಎಸೆತದಲ್ಲೇ ಲಖನೌ ಸೂಪರ್ ಜೈಂಟ್ಸ್ ನಾಯಕ ಕೆ.ಎಲ್. ರಾಹುಲ್ ಶೂನ್ಯಕ್ಕೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಈ ಮೂಲಕ ಗೋಲ್ಡನ್ ಡಕ್ ಔಟ್ ಆದ ಅಪಖ್ಯಾತಿಗೆ ಒಳಗಾದರು.
ಕಳೆದ ವರ್ಷ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವ ವಹಿಸಿದ್ದ ರಾಹುಲ್, ರನ್‌ಗಳ ಹೊಳೆ ಹರಿಸಿದ್ದರು. 13 ಪಂದ್ಯಗಳಲ್ಲಿ ಆರು ಅರ್ಧಶತಕಗಳನ್ನು ಒಳಗೊಂಡಂತೆ 626 ರನ್ ಪೇರಿಸಿದ್ದರು.
ಇನ್ನೊಂದೆಡೆ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.