ಪುಣೆ: ಐಪಿಎಲ್ 2022 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಸೇವೆಯಿಂದ ಗುಜರಾತ್ ಟೈಟನ್ಸ್ ತಂಡವು ವಂಚಿತವಾಗಿದೆ.
ಪಾಂಡ್ಯ ಅನುಪಸ್ಥಿತಿಯಲ್ಲಿ ಸ್ಪಿನ್ನರ್ ರಶೀದ್ ಖಾನ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಟಾಸ್ ವೇಳೆಯಲ್ಲಿ ಈ ಕುರಿತು ರಶೀದ್ ಮಾಹಿತಿ ನೀಡಿದರು. 'ಹಾರ್ದಿಕ್ ಪಾಂಡ್ಯ ತೊಡೆಸಂದು ನೋವಿನಿಂದ ಬಳುತ್ತಿದ್ದಾರೆ. ಇದರಿಂದಾಗಿ ವಿಶ್ರಾಂತಿ ಸೂಚಿಸಲಾಗಿದೆ' ಎಂದು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕಾಣಿಸಿಕೊಂಡಿರುವ ಗುಜರಾತ್ ಟೈಟನ್ಸ್, ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಗೆಲುವು ದಾಖಲಿಸಿ, ಒಟ್ಟು ಎಂಟು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
ಈಗ ಅಗ್ರಸ್ಥಾನ ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ ಚೆನ್ನೈ ವಿರುದ್ಧದ ಪಂದ್ಯವು ಗುಜರಾತ್ ಪಾಲಿಗೆ ಮಹತ್ವದೆನಿಸಿದೆ.
ಈ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ನಾಯಕ ಮಯಂಕ್ ಅಗರವಾಲ್ ಸೇವೆಯಿಂದಲೂ ಪಂಜಾಬ್ ಕಿಂಗ್ಸ್ ತಂಡವು ವಂಚಿತವಾಗಿತ್ತು. ಈ ಪಂದ್ಯದಲ್ಲಿ ಹೈದರಾಬಾದ್ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.