ADVERTISEMENT

IPL 2022 | ಬಟ್ಲರ್‌ ಭರ್ಜರಿ ಬ್ಯಾಟಿಂಗ್; ಗುಜರಾತ್ ಗೆಲುವಿಗೆ 189 ರನ್ ಗುರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಮೇ 2022, 16:13 IST
Last Updated 24 ಮೇ 2022, 16:13 IST
ಜೋಸ್ ಬಟ್ಲರ್‌ ಮತ್ತು ಸಂಜು ಸ್ಯಾಮ್ಸನ್‌ –ಪಿಟಿಐ ಚಿತ್ರ
ಜೋಸ್ ಬಟ್ಲರ್‌ ಮತ್ತು ಸಂಜು ಸ್ಯಾಮ್ಸನ್‌ –ಪಿಟಿಐ ಚಿತ್ರ   

ಕೋಲ್ಕತ್ತ: ಜೋಸ್ ಬಟ್ಲರ್‌ ಉತ್ತಮ ಬ್ಯಾಟಿಂಗ್ ನೆರವಿನಿಂದ ಗುಜರಾತ್‌ ಟೈಟನ್ಸ್‌ ವಿರುದ್ಧರಾಜಸ್ಥಾನ್ ರಾಯಲ್ಸ್‌ ತಂಡವು ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.

ಕೋಲ್ಕತ್ತದ ಈಡನ್‌ ಗಾರ್ಡನ್‌ನಲ್ಲಿ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್ ತಂಡವು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿದೆ.

ಜೋಸ್ ಬಟ್ಲರ್‌ 89, ಸಂಜು ಸ್ಯಾಮ್ಸನ್‌ 47, ದೇವದತ್ತ ಪಡಿಕ್ಕಲ್ 28 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.

ADVERTISEMENT

ಇತ್ತ ಗುಜರಾತ್‌ ಪರ ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಆರ್‌.ಸಾಯಿ ಕಿಶೋರ್‌ ಹಾಗೂ ಯಶ್ ದಯಾಳ್‌ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್‌ ತಂಡ ಇದೇ ಮೊದಲ ಬಾರಿ ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುತ್ತಿದೆ. ಇದೀಗ ಲೀಗ್ ಹಂತದಲ್ಲಿ ಅಗ್ರಸ್ಥಾನ ಗಳಿಸಿ ಪ್ಲೇ ಆಫ್‌ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಜಯಿಸಿದವರು ನೇರವಾಗಿ ಫೈನಲ್ ಪ್ರವೇಶಿಸುವರು. ಸೋತವರು ಎರಡನೇ ಕ್ವಾಲಿಫೈಯರ್ ಆಡಲಿದ್ದಾರೆ.

ಲೀಗ್ ಹಂತದಲ್ಲಿ ಉಭಯ ತಂಡಗಳು ಒಂದು ಬಾರಿ ಮುಖಾಮುಖಿಯಾಗಿದ್ದವು. ಗುಜರಾತ್ ಜಯಿಸಿತ್ತು.

ಅಂಕಪಟ್ಟಿಯಲ್ಲಿ ಗುಜರಾತ್ ಮೊದಲ ಮತ್ತು ರಾಯಲ್ಸ್‌ ಎರಡನೇ ಸ್ಥಾನ ಪಡೆದಿವೆ. ಆದರೆ, ಆಟಗಾರರ ಸಾಮರ್ಥ್ಯವನ್ನು ನೋಡಿದರೆ ಸಮಬಲಶಾಲಿಗಳಂತೆ ಕಾಣುತ್ತಿವೆ. ಉಭಯ ತಂಡಗಳ ನಾಯಕರಾದ ಹಾರ್ದಿಕ್ ಮತ್ತು ಸಂಜು ಸ್ಯಾಮ್ಸನ್ ಬ್ಯಾಟಿಂಗ್‌ನಲ್ಲಿಯೂ ಉಪಯುಕ್ತ ಕಾಣಿಕೆ ನೀಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.