ADVERTISEMENT

4 ಬಾರಿ ಐಪಿಎಲ್‌ ಫೈನಲ್ ಗೆದ್ದಿರುವ ಹಾರ್ದಿಕ್‌ಗೆ ಈ ಬಾರಿ ಯಶಸ್ಸು ಸಿಗಬಹುದೇ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಮೇ 2022, 13:20 IST
Last Updated 25 ಮೇ 2022, 13:20 IST
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ   

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಐದನೇ ಬಾರಿಗೆ ಫೈನಲ್ ಆಡುವ ಅದೃಷ್ಟ ಒಲಿದು ಬಂದಿದೆ.

ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಪಾಂಡ್ಯ, ನಾಲ್ಕು ಸಲ ಫೈನಲ್ ಆಡಿದ್ದರು. ಅಲ್ಲದೆ ಎಲ್ಲ ನಾಲ್ಕು ಬಾರಿ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ಈಗ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಆಡುತ್ತಿರುವ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಅವರಿಗೆ ಐದನೇ ಪ್ರಯತ್ನದಲ್ಲಿ ಗೆಲುವು ಸಿಗಬಹುದೇ ಎಂಬುದನ್ನು ಕಾದು ನೋಡಬೇಕಿದೆ.

ಹಾರ್ದಿಕ್ ಪಾಂಡ್ಯ, 2015 ಹಾಗೂ 2019 ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2017ರಲ್ಲಿ ಪುಣೆ ಸೂಪರ್ ಜೈಂಟ್ಸ್ ಮತ್ತು 2020ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವುಸಾಧಿಸಿಚಾಂಪಿಯನ್ ಆಗಿದ್ದ ಮುಂಬೈ ತಂಡದ ಸದಸ್ಯರಾಗಿದ್ದರು.

ಐಪಿಎಲ್ 2022ರಲ್ಲಿ ಪ್ಲೇ-ಆಫ್ ಹಂತದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಗುಜರಾತ್ ಟೈಟನ್ಸ್ ಫೈನಲ್‌ಗೆ ಪ್ರವೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.