ADVERTISEMENT

IPL 2022 LSG vs CSK: ಚೆನ್ನೈ ವಿರುದ್ಧ ಟಾಸ್ ಗೆದ್ದ ಲಖನೌ ಫೀಲ್ಡಿಂಗ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮಾರ್ಚ್ 2022, 13:45 IST
Last Updated 31 ಮಾರ್ಚ್ 2022, 13:45 IST
ರವೀಂದ್ರ ಜಡೇಜ ಹಾಗೂ ಕೆ.ಎಲ್. ರಾಹುಲ್
ರವೀಂದ್ರ ಜಡೇಜ ಹಾಗೂ ಕೆ.ಎಲ್. ರಾಹುಲ್   

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ರೋಚಕ ಪಂದ್ಯವನ್ನು ನಿರೀಕ್ಷಿಸಲಾಗಿದೆ.

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯದಲ್ಲೇ ಕಹಿ ಅನುಭವಿಸಿತ್ತು. ಅತ್ತ ಇದೇ ಮೊದಲ ಬಾರಿಗೆ ಐಪಿಎಲ್‌ಗೆ ಎಂಟ್ರಿ ಕೊಟ್ಟಿರುವ ಲಖನೌ ಸೂಪರ್ ಜೈಂಟ್ಸ್ ಕೂಡ ಸೋಲಿನೊಂದಿಗೆ ಅಭಿಯಾನ ಆರಂಭಿಸಿತ್ತು.

ADVERTISEMENT

ಮಹೇಂದ್ರ ಸಿಂಗ್ ಧೋನಿ, ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜ ಅವರಿಗೆ ಹಸ್ತಾಂತರಿಸಿದ್ದಾರೆ. ಇನ್ನೊಂದೆಡೆ ಕೆ.ಎಲ್. ರಾಹುಲ್ ಲಖನೌ ತಂಡದ ಚುಕ್ಕಾಣಿ ಹಿಡಿದಿದ್ದಾರೆ. ಇತ್ತಂಡಗಳಿಗೂ ಈ ಪಂದ್ಯ ಮಹತ್ವದೆನಿಸಿದೆ.

ಪ್ಲೇಯಿಂಗ್ ಇಲೆವೆನ್:

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜ (ನಾಯಕ), ಮಹೇಂದ್ರ ಸಿಂಗ್ ಧೋನಿ (ನಾಯಕ), ಶಿವಂ ದುಬೆ, ಡ್ವೇನ್ ಬ್ರಾವೊ, ಡ್ವೇನ್ ಪ್ರಿಟೋರಿಯಸ್, ಮುಕೇಶ್ ಚೌಧರಿ ಮತ್ತು ತುಷಾರ್ ದೇಶಪಾಂಡೆ.

ಲಖನೌ ಸೂಪರ್ ಜೈಂಟ್ಸ್: ಕೆ.ಎಲ್. ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಕೃಣಾಲ್ ಪಾಂಡ್ಯ, ದುಶ್ಮಂತ ಚಮೀರ, ಆಂಡ್ರ್ಯೂ ಟೈ, ರವಿ ಬೋಪಾರ ಮತ್ತು ಆವೇಶ್ ಖಾನ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.