ADVERTISEMENT

IPL 2022 LSG vs RR: ಆತ್ಮವಿಶ್ವಾಸದಲ್ಲಿ ರಾಹುಲ್ ಬಳಗ; ರಾಯಲ್ಸ್‌ಗೆ ಜಯದ ತವಕ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 19:31 IST
Last Updated 9 ಏಪ್ರಿಲ್ 2022, 19:31 IST
ಲಖನೌ ತಂಡದ ಕೆ.ಎಲ್. ರಾಹುಲ್ ಮತ್ತು ಜೇಸನ್ ಹೋಲ್ಡರ್
ಲಖನೌ ತಂಡದ ಕೆ.ಎಲ್. ರಾಹುಲ್ ಮತ್ತು ಜೇಸನ್ ಹೋಲ್ಡರ್   

ಮುಂಬೈ: ಸತತ ಮೂರು ಪಂದ್ಯಗಳಲ್ಲಿ ಜಯಗಳಿಸಿರುವ ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್‌ ತಂಡಕ್ಕೆ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ಬಳಗವು ಸವಾಲೊಡ್ಡಲು ಸಿದ್ಧವಾಗಿದೆ. ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.

ಮೊದಲ ಐಪಿಎಲ್ ಆಡುತ್ತಿರುವ ಲಖನೌ ತಂಡದ ಪಯಣ ಇಲ್ಲಿಯವರೆಗೂ ಉತ್ತಮವಾಗಿದೆ. ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಜಯಿಸಿ, ಒಂದರಲ್ಲಿ ಸೋತಿದೆ. ರಾಜಸ್ಥಾನ ತಂಡವು ಮೊದಲೆರಡು ಪಂದ್ಯಗಳಲ್ಲಿ ಅಮೋಘ ಜಯ ದಾಖಲಿಸಿತ್ತು. ಆದರೆ ಮೂರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಮುಗ್ಗರಿಸಿತು. ಇದೀಗ ಮತ್ತೆ ಗೆಲುವಿನ ಹಾದಿಗೆ ಮರಳುವ ಛಲದಲ್ಲಿದೆ.

ಪಂದ್ಯ ಆರಂಭ: ರಾತ್ರಿ 7.30

ADVERTISEMENT

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಹಾಟ್‌ಸ್ಟಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.