ADVERTISEMENT

IPL 2022: ಟ್ವೆಂಟಿ-20 ಕ್ರಿಕೆಟ್‌ನಲ್ಲಿ ರಶೀದ್ ಖಾನ್ 450 ವಿಕೆಟ್ ಸಾಧನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮೇ 2022, 11:32 IST
Last Updated 11 ಮೇ 2022, 11:32 IST
ರಶೀದ್ ಖಾನ್
ರಶೀದ್ ಖಾನ್   

ಪುಣೆ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಅಫ್ಗಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ 450 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಜಗತ್ತಿನ ಮೂರನೇ ಬೌಲರ್ ಎನಿಸಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರಶೀದ್, ಮಂಗಳವಾರ ಪುಣೆಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು. ರಶೀದ್ ನಾಲ್ಕು ವಿಕೆಟ್ ನೆರವಿನಿಂದ ಲಖನೌ ವಿರುದ್ಧ 62 ರನ್ ಅಂತರದ ಗೆಲುವು ದಾಖಲಿಸಿದ್ದ ಗುಜರಾತ್, ಪ್ಲೇ-ಆಫ್‌ ಹಂತಕ್ಕೆ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್‌ನ ಡ್ವೇನ್ ಬ್ರಾವೊ (587 ವಿಕೆಟ್) ಮುನ್ನಡೆಯಲ್ಲಿದ್ದು, ದಕ್ಷಿಣ ಆಫ್ರಿಕಾದ ಇಮ್ರಾನ್ ತಾಹೀರ್ (451) ಎರಡನೇ ಸ್ಥಾನದಲ್ಲಿದ್ದಾರೆ.

ಈಗ ತಾಹೀರ್ ಅವರನ್ನು ಹಿಂದಿಕ್ಕಿ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲು ರಶೀದ್‌ಗೆ ಕೇವಲ ಎರಡು ವಿಕೆಟ್‌ಗಳ ಅಗತ್ಯವಿದೆ. ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಈ ದಾಖಲೆ ಬರೆಯುವುದು ನಿಚ್ಚಳವೆನಿಸಿದೆ.

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತೀಯ ಬೌಲರ್‌ಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ರವಿಚಂದ್ರನ್ ಅಶ್ವಿನ್, ಒಟ್ಟು 273 ವಿಕೆಟ್ ಗಳಿಸಿದ್ದಾರೆ.

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಸಾಧಕರು:
ಡ್ವೇನ್ ಬ್ರಾವೊ: 587
ಇಮ್ರಾನ್ ತಾಹೀರ್: 451
ರಶೀದ್ ಖಾನ್: 450
ಸುನಿಲ್ ನಾರಾಯಣ್: 437
ಶಕಿಬ್ ಅಲ್ ಹಸನ್: 416

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.