ADVERTISEMENT

IPL: ಕ್ರಿಕೆಟ್ ಅಥವಾ ಹಾಕಿ ? ಅಶ್ವಿನ್ ಬ್ಯಾಟಿಂಗ್ ಶೈಲಿಗೆ ನೆಟ್ಟಿಗರಿಂದ ಟ್ರೋಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮೇ 2022, 12:48 IST
Last Updated 12 ಮೇ 2022, 12:48 IST
ಆರ್. ಅಶ್ವಿನ್
ಆರ್. ಅಶ್ವಿನ್   

ಮುಂಬೈ: ಪ್ರತಿಯೊಬ್ಬ ಬ್ಯಾಟರ್ ತಮ್ಮದೇ ಆದ ಬ್ಯಾಟಿಂಗ್ ಶೈಲಿ ಹೊಂದಿರುತ್ತಾರೆ. ರಾಹುಲ್ ದ್ರಾವಿಡ್ ಅವರಂತಹ ಸ್ಟೈಲಿಷ್ ಕ್ರಿಕೆಟಿಗರನ್ನು ನಾವು ಕಂಡಿದ್ದೇವೆ.

ಹಾಗಿರಬೇಕೆಂದರೆ ಈಗ ಐಪಿಎಲ್ಟೂರ್ನಿಯಲ್ಲಿ ವಿಚಿತ್ರ ಶೈಲಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ರವಿಚಂದ್ರನ್ ಅಶ್ವಿನ್ ಸುದ್ದಿಯಲ್ಲಿದ್ದಾರೆ.

ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅಶ್ವಿನ್, ವಿಚಿತ್ರ ಶೈಲಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಕುರಿತು ಕ್ರಿಕೆಟ್ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. ಇದು ಹಾಕಿ ಅಥವಾ ಕ್ರಿಕೆಟ್ ? ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅಶ್ವಿನ್, ಐಪಿಎಲ್‌ನಲ್ಲಿ ಚೊಚ್ಚಲ ಅರ್ಧಶತಕ ಗಳಿಸಿದ್ದರು. ಈ ಮೂಲಕ ಬ್ಯಾಟಿಂಗ್‌ನಲ್ಲೂ ಸಾಮರ್ಥ್ಯ ಮೆರೆದಿದ್ದಾರೆ.

38 ಎಸೆತಗಳನ್ನು ಎದುರಿಸಿದ ಅಶ್ವಿನ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು.

ಆದರೂ ಅಶ್ವಿನ್ ಹೋರಾಟ ವ್ಯರ್ಥವೆನಿಸಿತು. ರಾಜಸ್ಥಾನ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಎಂಟು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.