ADVERTISEMENT

IPL 2022: ಕೊಹ್ಲಿ ಆಯ್ತು, ಈಗ ಶೂನ್ಯಕ್ಕೆ ಔಟ್ ಆದ ಫಫ್ ಡುಪ್ಲೆಸಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಏಪ್ರಿಲ್ 2022, 10:47 IST
Last Updated 30 ಏಪ್ರಿಲ್ 2022, 10:47 IST
ಫಫ್ ಡುಪ್ಲೆಸಿ
ಫಫ್ ಡುಪ್ಲೆಸಿ   

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯ ಟ್ವೆಂಟಿ-20 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಫ್ ಡುಪ್ಲೆಸಿ ಶೂನ್ಯಕ್ಕೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದ್ದಾರೆ.

ಶನಿವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಾಲ್ಕು ಎಸೆತಗಳನ್ನು ಎದುರಿಸಿದ ಫಫ್ ಖಾತೆ ತೆರೆಯಲಾಗದೇ ಪೆವಿಲಿಯನ್‌ಗೆ ಮರಳಿದರು.

ಪ್ರದೀಪ್ ಸಾಂಗ್ವಾನ್ ದಾಳಿಯಲ್ಲಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾಗೆ ಕ್ಯಾಚಿತ್ತು ಫಫ್ ವಿಕೆಟ್ ಒಪ್ಪಿಸಿದರು.

ADVERTISEMENT

ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಫಫ್ 23 ರನ್ ಗಳಿಸಿ ಔಟಾಗಿದ್ದರು. ಈ ಮೂಲಕ ವೈಫಲ್ಯಕ್ಕೊಳಗಾಗಿದ್ದಾರೆ.

ಇದೇ ಐಪಿಎಲ್‌ನಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 96 ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧ 88 ರನ್ ಗಳಿಸಿ ಫಫ್ ಗಮನ ಸೆಳೆದಿದ್ದರು.

ಇನ್ನೊಂದೆಡೆ ವಿರಾಟ್ ಕೊಹ್ಲಿ, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಮೊದಲ ಎಸೆತದಲ್ಲೇ ಡಕ್ ಔಟ್ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.