ADVERTISEMENT

IPL 2022 RCB vs PBKS: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮಾರ್ಚ್ 2022, 13:40 IST
Last Updated 27 ಮಾರ್ಚ್ 2022, 13:40 IST
ಮಯಂಕ್ ಅಗರವಾಲ್ ಹಾಗೂ ಫಫ್ ಡುಪ್ಲೆಸಿ
ಮಯಂಕ್ ಅಗರವಾಲ್ ಹಾಗೂ ಫಫ್ ಡುಪ್ಲೆಸಿ   

ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಂಕ್ ಅಗರವಾಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಅವರಿಂದ ತೆರವಾಗಿರುವ ಆರ್‌ಸಿಬಿ ನಾಯಕ ಸ್ಥಾನಕ್ಕೆ ಫಫ್ ಡುಪ್ಲೆಸಿ ಆಯ್ಕೆಯಾಗಿದ್ದಾರೆ. ಇನ್ನೊಂದೆಡೆ ಮಯಂಕ್ ಅಗರವಾಲ್ ಅವರು ಪಂಜಾಬ್ ಕಿಂಗ್ಸ್ ತಂಡದ ಪೂರ್ಣಾವಧಿ ನಾಯಕತ್ವ ವಹಿಸಿಕೊಂಡ ಬಳಿಕ ಮೊದಲ ಪಂದ್ಯದಲ್ಲೇ ಬೆಂಗಳೂರು ಸವಾಲನ್ನು ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT