ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಬ್ಯಾಟರ್ ಜೋಸ್ ಬಟ್ಲರ್, ಅಮೋಘ ಶತಕ ಸಿಡಿಸಿದ್ದಾರೆ.
ಸೋಮವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬಟ್ಲರ್ ಕೇವಲ 59 ಎಸೆತಗಳಲ್ಲಿ ಶತಕ ಗಳಿಸಿದರು.
ಈ ಮೂಲಕ ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಎರಡನೇ ಶತಕ ಸಾಧನೆ ಮಾಡಿದರು.
ಈ ಮೊದಲು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಬಟ್ಲರ್ ಶತಕ ಗಳಿಸಿದ್ದರು.
ಒಟ್ಟಾರೆಯಾಗಿ ಇಂಗ್ಲೆಂಡ್ ಮೂಲದ ಬಟ್ಲರ್, ಐಪಿಎಲ್‌ನಲ್ಲಿ ಮೂರನೇ ಶತಕ ಬಾರಿಸಿದ್ದಾರೆ.
61 ಎಸೆತಗಳನ್ನು ಎದುರಿಸಿದ ಬಟ್ಲರ್ ಒಂಬತ್ತು ಬೌಂಡರಿ ಹಾಗೂ ಐದು ಸಿಕ್ಸರ್ ನೆರವಿನಿಂದ 103 ರನ್ ಗಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.