ಮುಂಬೈ: ಎಡಗೈ ಅನುಭವಿ ಬ್ಯಾಟರ್ ಶಿಖರ್ ಧವನ್, ಐಪಿಎಲ್ನಲ್ಲಿ 6,000 ಹಾಗೂ ಟ್ವೆಂಟಿ-20 ಕ್ರಿಕೆಟ್ನಲ್ಲಿ 9,000 ರನ್ಗಳ ಸಾಧನೆ ಮಾಡಿದ್ದಾರೆ.
ಐಪಿಎಲ್ 2022 ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ 36 ವರ್ಷದ ಧವನ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸಿದರು.
ಈ ಮೂಲಕ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಬಳಿಕ 6,000 ರನ್ ಗಳಿಸಿದ ಎರಡನೇ ಬ್ಯಾಟರ್ ಎನಿಸಿದ್ದಾರೆ. 200ನೇ ಐಪಿಎಲ್ ಪಂದ್ಯದಲ್ಲಿ ಧವನ್ ಈ ಸ್ಮರಣೀಯ ಸಾಧನೆ ಮಾಡಿದ್ದಾರೆ.
ಹಾಗೆಯೇ ಟ್ವೆಂಟಿ-20 ಕ್ರಿಕೆಟ್ನಲ್ಲಿ 9,000 ರನ್ ಗಳಿಸಿದ ಭಾರತದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.
ಐಪಿಎಲ್ನಲ್ಲಿ ಗರಿಷ್ಠ ರನ್ ಸಾಧಕರು:
ವಿರಾಟ್ ಕೊಹ್ಲಿ: 6,402
ಶಿಖರ್ ಧವನ್: 6050*
ರೋಹಿತ್ ಶರ್ಮಾ: 5,764
ಡೇವಿಡ್ ವಾರ್ನರ್: 5,668
ಸುರೇಶ್ ರೈನಾ: 5,528
ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯರು:
ವಿರಾಟ್ ಕೊಹ್ಲಿ: 10,392
ರೋಹಿತ್ ಶರ್ಮಾ: 10,048
ಶಿಖರ್ ಧವನ್: 9004*
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.