ADVERTISEMENT

ಸತತ ವೈಫಲ್ಯ; ಕೊಹ್ಲಿ, ರೋಹಿತ್‌ಗೆ ಗಂಗೂಲಿ ಬೆಂಬಲ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2022, 10:05 IST
Last Updated 29 ಏಪ್ರಿಲ್ 2022, 10:05 IST
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ (ಸಂಗ್ರಹ ಚಿತ್ರ)
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ (ಸಂಗ್ರಹ ಚಿತ್ರ)   

ಮುಂಬೈ: ಕಳಪೆ ಬ್ಯಾಟಿಂಗ್ ಫಾರ್ಮ್‌ನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬೆಂಬಲ ವ್ಯಕ್ತಪಡಿಸಿದ್ದಾರೆ.

'ನ್ಯೂಸ್ 18'ಗೆ ನೀಡಿದ ಸಂದರ್ಶನದಲ್ಲಿ ಸೌರವ್ ಈ ಕುರಿತು ಪ್ರತಿಕ್ರಿಯಿಸಿದ್ದು, ವಿರಾಟ್ ಹಾಗೂ ರೋಹಿತ್ ಉತ್ತಮ ಲಯ ಕಂಡುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

'ವಿರಾಟ್ ಹಾಗೂ ರೋಹಿತ್ ಶ್ರೇಷ್ಠ ಆಟಗಾರರಾಗಿದ್ದು, ಮತ್ತೆ ಫಾರ್ಮ್‌ಗೆ ಮರಳುತ್ತಾರೆ ಎಂಬುದರ ಬಗ್ಗೆ ನನಗೆ ಖಾತ್ರಿಯಿದೆ. ಅವರಿಬ್ಬರು ಶೀಘ್ರದಲ್ಲೇ ರನ್ ಗಳಿಸಲಿದ್ದಾರೆ ಎಂದು ಭಾವಿಸುತ್ತೇನೆ. ವಿರಾಟ್ ಕೊಹ್ಲಿ ಯಾವುದರ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂಬುದು ತಿಳಿದಿಲ್ಲ. ಆದರೆ ಅವರು ಲಯಕ್ಕೆ ಮರಳಿ ರನ್ ಗಳಿಸುತ್ತಾರೆ. ಅವರೊಬ್ಬ ಶ್ರೇಷ್ಠ ಆಟಗಾರ' ಎಂದು ತಿಳಿಸಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕಳಪೆ ಆಟ ಮುಂದುವರಿದಿದ್ದು, ಒಂಬತ್ತು ಪಂದ್ಯಗಳಲ್ಲಿ 16ರ ಸರಾಸರಿಯಲ್ಲಿ ಕೇವಲ 128 ರನ್ ಮಾತ್ರ ಗಳಿಸಿದ್ದಾರೆ.

ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಎಂಟು ಪಂದ್ಯಗಳಲ್ಲಿ 19.13ರ ಸರಾಸರಿಯಲ್ಲಿ 153 ರನ್ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.