ಚೆನ್ನೈ: ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡ ಲಖನೌಗೆ 183ರನ್ಗಳ ಗೆಲುವಿನ ಗುರಿ ನೀಡಿದೆ.
ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಂಬೈ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 182 ರನ್ಗಳಿಸಿತು. ಈ ಪಂದ್ಯ ಗೆಲ್ಲಲು ಲಖನೌ 183 ರನ್ ಗಳಿಸಬೇಕಿದೆ.
ಕ್ಯಾಮರೆನ್ ಗ್ರಿನ್ 41, ಸೂರ್ಯಕುಮಾರ್ ಯಾದವ್ 33, ತಿಲಕ್ ವರ್ಮಾ 26 ರನ್ ಗಳಿಸಿ ಗಮನ ಸೆಳೆದರು. ಲಖನೌ ಪರ ನವೀನ್ 3, ಠಾಕೂರ್ 2, ಬಿಷ್ಣೋಯಿ 1 ವಿಕೆಟ್ ಪಡೆದರು.
ಪ್ಲೇ ಆಫ್ಗೆ ‘ನಾಟಕೀಯ’ ರೀತಿಯಲ್ಲಿ ಮುಂಬೈ ಇಂಡಿಯನ್ಸ್ ಪ್ರವೇಶ ಪಡೆದಿತ್ತು.
ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದ್ದು, ಗೆಲುವು ಸಾಧಿಸುವ ತಂಡ ಮೇ 26 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ‘ಕ್ವಾಲಿಫೈಯರ್–2’ ಪಂದ್ಯದಲ್ಲಿ ಆಡಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.