ADVERTISEMENT

IPL–2023 ಕ್ವಾಲಿಫೈಯರ್ 2: ಗುಜರಾತ್ ಎದುರು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಮುಂಬೈ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಮೇ 2023, 14:25 IST
Last Updated 26 ಮೇ 2023, 14:25 IST
 ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಹಾಗೂ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್ ಶರ್ಮಾ (ಚಿತ್ರಕೃಪೆ: @IPL)
ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಹಾಗೂ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್ ಶರ್ಮಾ (ಚಿತ್ರಕೃಪೆ: @IPL)   

ಅಹಮದಾಬಾದ್: ಐದು ಸಲದ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತಂಡವು ಈ ಬಾರಿಯ ಐಪಿಎಲ್‌ 2ನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್ ಟೈಟನ್ಸ್ ಎದುರು ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.

ಮಳೆಯಿಂದಾಗಿ ಟಾಸ್‌ 15 ನಿಮಿಷ ತಡವಾಯಿತು. ಈ ಪಂದ್ಯದಲ್ಲಿ ಗೆದ್ದರಷ್ಟೇ ಫೈನಲ್‌ಗೆ ಲಗ್ಗೆ ಇಡಲು ಸಾಧ್ಯವಾಗಲಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಳೆದ ವರ್ಷ ನಡೆದಿದ್ದ ಫೈನಲ್‌ನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಬಳಗವು, ರಾಜಸ್ಥಾನ ರಾಯಲ್ಸ್‌ ಎದುರು ಜಯ ಸಾಧಿಸಿ ಪ್ರಶಸ್ತಿ ವಶಪಡಿಸಿಕೊಂಡಿತ್ತು. ಈ ಬಾರಿಯೂ ಇಲ್ಲಿಯೇ ಎರಡನೇ ಕ್ವಾಲಿಫೈಯರ್ ಹಾಗೂ ಫೈನಲ್ ಆಯೋಜನೆಗೊಂಡಿವೆ.

ADVERTISEMENT
ಲೀಗ್‌ ಹಂತದಲ್ಲಿ ಸಾಧನೆ
ಟೂರ್ನಿಯುದ್ದಕ್ಕೂ ಅಮೋಘ ಆಟವಾಡಿರುವ ಹಾರ್ದಿಕ್ ಬಳಗವು ಲೀಗ್ ಹಂತದಲ್ಲಿ ಆಡಿರುವ 14 ಪಂದ್ಯಗಳ ಪೈಕಿ 10ರಲ್ಲಿ ಜಯ ಸಾಧಿಸಿ 20 ಅಂಕಗಳೊಂದಿಗೆ ಮೊದಲ ಸ್ಥಾನದೊಂದಿಗೆ ಪ್ಲೇ ಆಫ್‌ ಪ್ರವೇಶಿಸಿತ್ತು. ಮೊದಲ ಕ್ವಾಲಿಫೈಯರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಸೋಲು ಕಂಡಿದೆ. ರೋಹಿತ್‌ ಪಡೆ, ಲೀಗ್ ಹಂತದಲ್ಲಿ ಆಡಿರುವ 14 ಪಂದ್ಯಗಳಲ್ಲಿ 8 ಜಯ ಕಂಡಿದೆ. ಅದರೊಂದಿಗೆ ನಾಲ್ಕನೇ ಸ್ಥಾನ ಗಳಿಸಿ, ಪ್ಲೇ ಆಫ್‌ ಪ್ರವೇಶಿಸಿತ್ತು. ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್‌ ವಿರುದ್ಧ ಜಯಿಸಿ, ಇದೀಗ 2ನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರಿಗೆ ಸವಾಲೊಡ್ಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.