ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್‌ಜೈಂಟ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಮಾಡಲಿದೆ.
ಲಖನೌ ಸೂಪರ್‌ಜೈಂಟ್ಸ್ ತಂಡದ ನಾಯಕ, ಕನ್ನಡಿಗ ಕೆ.ಎಲ್. ರಾಹುಲ್ ಅವರ ಆಟವನ್ನು ಆಸ್ವಾದಿಸುವ ಅವಕಾಶ ಪ್ರೇಕ್ಷಕರಿಗೆ ಒದಗಿಬಂದಿದೆ. ಮೂರು ವರ್ಷಗಳ ನಂತರ ರಾಹುಲ್ ತಮ್ಮ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯವಾಡುತ್ತಿದ್ದಾರೆ.
ತವರಿನ ಅಭಿಮಾನಿಗಳ ಎದುರು ಪುಟಿದೇಳುವ ಹುಮ್ಮಸ್ಸಿನಲ್ಲಿರುವ ಡುಪ್ಲೆಸಿ ಬಳಗವು ಲಖನೌಗೆ ಕಠಿಣ ಸವಾಲೊಡ್ಡುವ ನಿರೀಕ್ಷೆ ಇದೆ. ಪಿಚ್ ಮೇಲ್ನೋಟಕ್ಕೆ ಸ್ಪರ್ಧಾತ್ಮಕವಾಗಿ ಕಂಡಿದೆ ಎಂದು ಕ್ಯುರೆಟರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.