ADVERTISEMENT

IPL 2023: ಐಪಿಎಲ್ ಆರಂಭಕ್ಕೂ ಮುನ್ನವೇ ಆರ್‌ಸಿಬಿಗೆ ಹಿನ್ನಡೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2023, 6:43 IST
Last Updated 30 ಮಾರ್ಚ್ 2023, 6:43 IST
   

ಬೆಂಗಳೂರು: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಿನ್ನಡೆ ಅನುಭವಿಸಿದೆ.

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ಇಬ್ಬರು ಸ್ಟಾರ್ ಆಟಗಾರರ ಲಭ್ಯತೆ ಇನ್ನೂ ಗೊಂದಲದಲ್ಲಿದೆ.

ವೇಗದ ಬೌಲರ್ ಜೋಶ್ ಹೇಜಲ್‌ವುಡ್, ಐಪಿಎಲ್‌ ಟೂರ್ನಿಯ ದ್ವಿತಿಯಾರ್ಧದಲ್ಲಷ್ಟೇ ಆರ್‌ಸಿಬಿ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

ADVERTISEMENT

ಇದನ್ನೂ ಮುನ್ನ ಗಾಯಮುಕ್ತರಾದ ಬಳಿಕ ತಮ್ಮ ಲಭ್ಯತೆಯ ಆಸ್ಟ್ರೇಲಿಯಾದ ವೈದ್ಯಕೀಯ ತಂಡವನ್ನು ಸಂಪರ್ಕಿಸಲಿದ್ದಾರೆ ಎಂದು ವರದಿಯಾಗಿದೆ.

ಭಾರತ ವಿರುದ್ಧ ಏಕದಿನ ಸರಣಿಯಲ್ಲೂ ಹೇಜಲ್‌ವುಡ್ ಭಾಗವಹಿಸಿರಲಿಲ್ಲ.

ಮತ್ತೊಂದೆಡೆ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್, ಇನ್ನಷ್ಟೇ ಗುಣಮುಖರಾಗಬೇಕಿದೆ. ಹಾಗಾಗಿ ಬೆಂಗಳೂರಿನಲ್ಲಿ ಏಪ್ರಿಲ್ 2ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.