ADVERTISEMENT

IPL 2024 | ಚೆನ್ನೈನಲ್ಲಿ ಐಪಿಎಲ್‌ ಫೈನಲ್ ಪಂದ್ಯ?

ಪಿಟಿಐ
Published 24 ಮಾರ್ಚ್ 2024, 5:03 IST
Last Updated 24 ಮಾರ್ಚ್ 2024, 5:03 IST
<div class="paragraphs"><p>ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣ ( ಸಂಗ್ರಹ ಚಿತ್ರ)</p></div>

ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣ ( ಸಂಗ್ರಹ ಚಿತ್ರ)

   

ನವದೆಹಲಿ: ಇಂಡಿಯನ್ ಪ್ರೀಮಿಯರ್‌ ಲೀಗ್‌ನ ಫೈನಲ್ ಪಂದ್ಯ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಮೇ 26ರಂದು ನಡೆಯುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಒಂದು ಕ್ವಾಲಿಫೈರ್ ಪಂದ್ಯ ಮತ್ತು ಒಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ. ಇನ್ನೊಂದು ಕ್ವಾಲಿಫೈರ್ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ADVERTISEMENT

‘ಐಪಿಎಲ್‌ನ ಉದ್ಘಾಟನಾ ಮತ್ತು ಫೈನಲ್ ಪಂದ್ಯ ಹಿಂದಿನ ವರ್ಷದ ಚಾಂಪಿಯನ್ ತಂಡದ ತವರಿನಲ್ಲಿ ನಡೆಯುವುದು ಸಂಪ್ರದಾಯದಂತೆ ಬೆಳೆದುಬಂದಿದೆ. ಈ ಬಾರಿ ಚೆನ್ನೈ ಸೂಪರ್‌ ಕಿಂಗ್ಸ್‌ ತವರಿಗೆ ಈ ಪಂದ್ಯಗಳ ಆತಿಥ್ಯದ ಅವಕಾಶ ಒಲಿದಿದೆ’ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ಐಪಿಎಲ್‌ನ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದ್ದು, ಶೀಘ್ರವೇ ಅಂತಿಮಗೊಳಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.