ಕೋಲ್ಕತ್ತ: ಆರಂಭಿಕ ಆಟಗಾರರ ಅಬ್ಬರದ ಅರ್ಧಶತಕದ ನೆರವಿನಿಂದ ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವು 6 ವಿಕೆಟ್ ಕಳೆದುಕೊಂಡು 261ರನ್‌ಗಳ ಬೃಹತ್ ಮೊತ್ತ ಪೇರಿಸಿದೆ.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಕೋಲ್ಕತ್ತ ತಂಡದ ಬ್ಯಾಟರ್‌ಗಳು ಮೊದಲ ಓವರ್‌ನಿಂದಲೇ ಅಬ್ಬರಿಸಲು ಪ್ರಾರಂಭಿಸಿದರು.
ಫಿಲಿಪ್ ಸಾಲ್ಟ್ 37 ಎಸೆತಗಳಲ್ಲಿ 75 ರನ್ ಬಾರಿಸಿದರೆ, ಮತ್ತೊಬ್ಬ ಆರಂಭಿಕ ಸುನಿಲ್ ನರೈನ್ 32 ಎಸೆತಗಳಲ್ಲಿ 71 ರನ್ ಗಳಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 138 ರನ್‌ಗಳು ಸೇರಿಸಿದರು.
ಮೂರನೇ ಕ್ರಮಾಂಕದಲ್ಲಿ ಬಂದ ವೆಂಕಟೇಶ್ ಆಯ್ಯರ್ 23 ಎಸೆತಗಳಲ್ಲಿ 39 ರನ್‌ಗಳಿಸಿದರು. ಆಂದ್ರೆ ರಸೆಲ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಕ್ರಮವಾಗಿ 24 ಹಾಗೂ 28 ಗಳಿಸಿದರು.
ಪಂಜಾಬ್ ಪರ ಅರ್ಶದೀಪ್ ಸಿಂಗ್ 2 ವಿಕೆಟ್ ಪಡೆದರೆ, ಸಾಮ್ ಕರನ್, ಹರ್ಷಲ್ ಪಟೇಲ್ ಹಾಗೂ ರಾಹುಲ್ ಚಹರ್‌ಗೆ ಒಂದು ವಿಕೆಟ್ ಲಭಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.