ಮುಲ್ಲನಪುರ: ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಜಸ್ಥಾನ ರಾಯಲ್ಸ್‌ಗೆ 147 ರನ್‌ಗಳ ಗೆಲುವಿನ ಗುರಿ ನೀಡಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟ್ ಮಾಡಿತು.
ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 147 ರನ್‌ಗಳ ಕಡಿಮೆ ಮೊತ್ತಕ್ಕೆ ಕುಸಿಯಿತು. ಪಂಜಾಬ್ ಪರ ಅಶುತೋಷ್ 31, ಜಿತೇಶ್ 29 ರನ್‌ಗಳಿಸಿ ಗಮನ ಸೆಳೆದರು.
ರಾಯಲ್ಸ್ ಪರ ಅವೇಶ್ ಖಾನ್ ಹಾಗೂ ಕೇಶವ ಮಹಾರಾಜ್ ತಲಾ 2 ವಿಕೆಟ್ ಪಡೆದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.