ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿಯ ನಿರೀಕ್ಷೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಶುಭ ಹಾರೈಸುತ್ತಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕ ವಿಜಯೇಂದ್ರ, ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
ಇಂದು ಸಂಜೆ ಅಹಮದಾಬಾದ್‌ನಲ್ಲಿ ನಡೆಯಿರುವ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡದ ಎದುರಿಸಲಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಆರ್‌ಸಿಬಿಯ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಕೆಲವರು ದೇವಾಲಯಗಳಲ್ಲಿ ಆರ್‌ಸಿಬಿ ಗೆಲ್ಲಲ್ಲಿ ಎಂದು ವಿಶೇಷ ಪೂಜೆ ನೇರವೆರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.