
ಚಿನ್ನಸ್ವಾಮಿ ಕ್ರೀಡಾಂಗಣ
-ಪ್ರಜಾವಾಣಿ ಸಂಗ್ರಹ ಚಿತ್ರ
ಬೆಂಗಳೂರು: ಪಂದ್ಯ ನಡೆಯುವ ಸಮಯದಲ್ಲಿ ಎಷ್ಟೇ ಜೋರಾಗಿ ಮಳೆ ಬಂದರೂ 15 ರಿಂದ 20 ನಿಮಿಷದೊಳಗೆ ಮತ್ತೆ ಪಂದ್ಯ ಮುಂದುವರಿಯಲು ಅವಕಾಶ ಮಾಡಿಕೊಡುವ ಸೌಲಭ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದೆ.
ದಶಕದ ಹಿಂದೆ ಇಲ್ಲಿ ಅಳವಡಿಸಲಾಗಿರುವ ಸಬ್ ಏರ್ ಸಿಸ್ಟಂ ತಂತ್ರಜ್ಞಾನದಿಂದ ಮಳೆ ನೀರನ್ನು ಶೀಘ್ರವಾಗಿ ಹೊರಹಾಕಬಹುದು. ಮೈದಾನವನ್ನು ಪಂದ್ಯಕ್ಕೆ ಅಣಿಗೊಳಿಸಬಹುದು. ಆದ್ದರಿಂದ ಮಳೆಯಿಂದಾಗಿ ಪಂದ್ಯ ರದ್ದಾಗುವುದು ತೀರಾ ವಿರಳ ಎಂದು ಕೆಎಸ್‌ಸಿಎ ಮೂಲಗಳು ಹೇಳುತ್ತವೆ.
ಜೋರಾಗಿ ಮಳೆ ಬಂದು ನಿಂತರೆ ತೊಂದರೆಯಿಲ್ಲ.
ಮೈದಾನವನ್ನು ಬೇಗನೆ ಅಣಿಗೊಳಿಸಬಹುದು. ಆದರೆ ಸತತವಾಗಿ ಮಳೆ ಹನಿಯುತ್ತಲೇ ಇದ್ದರೆ ಪಂದ್ಯ ಮುಂದುವರಿಸುವುದು ತುಸು ಕಷ್ಟ ಎಂದೂ ಹೇಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.