ಐಪಿಎಲ್ 2025: ಎಲ್ಲ 10 ತಂಡಗಳ ನಾಯಕರು
(ಚಿತ್ರ ಕೃಪೆ: X/@IPL)
ಮುಂಬೈ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೂ ಮುನ್ನ ಎಲ್ಲ 10 ತಂಡಗಳ ನಾಯಕರು ಇಂದು (ಗುರುವಾರ) ಒಟ್ಟು ಸೇರಿದ್ದಾರೆ.
ವಾಣಿಜ್ಯ ನಗರಿ ಮುಂಬೈಯಲ್ಲಿ ಎಲ್ಲ 10 ಫ್ರಾಂಚೈಸಿಗಳ ನಾಯಕರ ಸಭೆ ನಡೆದಿದೆ. ಬಳಿಕ ಎಲ್ಲರೂ ಜೊತೆಯಾಗಿ ಫೋಟೊಗೆ ಪೋಸ್ ಕೊಟ್ಟಿದ್ದಾರೆ.
ಈ ಸಲ ಐಪಿಎಲ್ ಟೂರ್ನಿಯಲ್ಲಿ ಭಾರತೀಯ ಆಟಗಾರರ ಪ್ರಾಬಲ್ಯ ಕಾಣಿಸಿಕೊಂಡಿದೆ. ಒಂಬತ್ತು ಫ್ರಾಂಚೈಸಿಗಳಿಗೆ ಭಾರತೀಯ ಆಟಗಾರರೇ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್, ವಿದೇಶದ ಏಕಮಾತ್ರ ನಾಯಕರಾಗಿದ್ದು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಜತ್ ಪಾಟೀದಾರ್, ಮುಂಬೈ ಇಂಡಿಯನ್ಸ್‌ಗೆ ಹಾರ್ದಿಕ್ ಪಾಂಡ್ಯ, ಚೆನ್ನೈ ಸೂಪರ್ ಕಿಂಗ್ಸ್‌ಗೆ ಋತುರಾಜ್ ಗಾಯಕವಾಡ್, ಡೆಲ್ಲಿ ಕ್ಯಾಪಿಟಲ್ಸ್‌ಗೆ ಅಕ್ಷರ್ ಪಟೇಲ್, ಗುಜರಾತ್ ಜೈಂಟ್ಸ್‌ಗೆ ಶುಭಮನ್ ಗಿಲ್, ಕೋಲ್ಕತ್ತ ನೈಟ್ ರೈಡರ್ಸ್‌ಗೆ ಅಜಿಂಕ್ಯ ರಹಾನೆ, ಲಖನೌ ಸೂಪರ್ ಜೈಂಟ್ಸ್‌ಗೆ ರಿಷಭ್ ಪಂತ್, ಪಂಜಾಬ್ ಕಿಂಗ್ಸ್‌ಗೆ ಶ್ರೇಯಸ್ ಅಯ್ಯರ್ ಮತ್ತು ರಾಜಸ್ಥಾನ ರಾಜಲ್ಸ್‌ಗೆ ಸಂಜು ಸ್ಯಾಮ್ಸನ್ ನಾಯಕರಾಗಿದ್ದಾರೆ.
ಈ ಪೈಕಿ ರಜತ್ ಪಾಟೀದಾರ್ ಹಾಗೂ ಅಕ್ಷರ್ ಪಟೇಲ್ ಐಪಿಎಲ್‌ನಲ್ಲಿ ಮೊದಲ ಬಾರಿ ಕಪ್ತಾನರಾಗಿ ಆಯ್ಕೆಯಾಗಿದ್ದಾರೆ.
ಹಾರ್ದಿಕ್ ಪಾಂಡ್ಯ ಒಂದು ಪಂದ್ಯದ ನಿಷೇಧ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
ಹಾಗೆಯೇ ಗಾಯದಿಂದ ಚೇತರಿಕೆಯ ಹಾದಿಯಲ್ಲಿರುವ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬದಲು ಮೊದಲ ಮೂರು ಪಂದ್ಯಗಳಲ್ಲಿ ರಿಯಾನ್ ಪರಾಗ್ ನಾಯಕರಾಗಲಿದ್ದಾರೆ.
ಐಪಿಎಲ್ 2025: ಎಲ್ಲ 10 ತಂಡಗಳ ನಾಯಕರು
ಎಲ್ಲ 10 ತಂಡಗಳ ನಾಯಕರ ಪಟ್ಟಿ ಇಂತಿದೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟೀದಾರ್
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕವಾಡ್
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್
ಗುಜರಾತ್ ಜೈಂಟ್ಸ್: ಶುಭಮನ್ ಗಿಲ್
ಕೋಲ್ಕತ್ತ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ
ಲಖನೌ ಸೂಪರ್ ಜೈಂಟ್ಸ್: ರಿಷಭ್ ಪಂತ್
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್
ರಾಜಸ್ಥಾನ ರಾಜಲ್ಸ್: ಸಂಜು ಸ್ಯಾಮ್ಸನ್
ಸನ್‌ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.