ವಿರಾಟ್ ಕೊಹ್ಲಿ
(ಪಿಟಿಐ ಚಿತ್ರ)
ಬೆಂಗಳೂರು: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಮಂಗಳವಾರ) ಸಂಜೆ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಐಪಿಎಲ್ ಆರಂಭವಾಗಿ 18 ವರ್ಷಗಳಾಗಿವೆ. ಆದರೆ ಆರ್‌ಸಿಬಿ ಹಾಗೂ ಪಂಜಾಬ್ ಈವರೆಗೆ ಕಪ್ ಗೆದ್ದಿಲ್ಲ. ಹಾಗಾಗಿ ಇಂದಿನ ಪಂದ್ಯದಲ್ಲಿ ಯಾವ ತಂಡವು ಕಪ್ ಇದ್ದರೂ ನೂತನ ಇತಿಹಾಸ ಸೃಷ್ಟಿಯಾಗಲಿದೆ.
ಕಳೆದ 18 ವರ್ಷಗಳಿಂದ ಆರ್‌ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಪ್ರತಿನಿಧಿಸುತ್ತಿದ್ದಾರೆ. ಅಭಿಮಾನಿಗಳು ಸಹ ಆರ್‌ಸಿಬಿ ಚೊಚ್ಚಲ ಕಪ್ ಎತ್ತಿ ಹಿಡಿಯುವುದನ್ನು ನೋಡಲು ಕಾತರದಲ್ಲಿದ್ದಾರೆ.
ಅತ್ತ ಪಂಜಾಬ್ ಕಿಂಗ್ಸ್ ಅಭಿಮಾನಿಗಳು ಸಹ ಚೊಚ್ಚಲ ಕಪ್ ನಿರೀಕ್ಷೆಯಲ್ಲಿದ್ದಾರೆ. ಆರ್‌ಸಿಬಿ ಅಭಿಮಾನಿಗಳು 'ಈ ಸಲ ಕಪ್ ನಮ್ದೇ' ಎಂದಾಗ ಅದಕ್ಕೆ ಪ್ರತಿಯಾಗಿ 'ಮುಂದಿನ ಸಲ ಖಂಡಿತ' ಎಂದು ಪ್ರತಿಕ್ರಿಯಿಸಿದ್ದಾರೆ.
ಒಟ್ಟಿನಲ್ಲಿ ಆರ್‌ಸಿಬಿ ಅಭಿಮಾನಿಗಳ 18 ವರ್ಷಗಳ ಕಾಯುವಿಕೆಗೆ ಇಂದು ಕೊನೆಯಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಚಕ ಹಣಾಹಣಿಯಂತೂ ಗ್ಯಾರಂಟಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.