ಲಖನೌ: ರಾಯಲ್ ಚಾಲೆಂಜರ್ಸ್ ಹಂಗಾಮಿ ನಾಯಕ ಜಿತೇಶ್ ಶರ್ಮಾ ಅವರ ಅಜೇಯ 85 ರನ್‌ಗಳ (33 ಎಸೆತ) ಅಮೋಘ ಆಟದಿಂದ ಮಂಗಳವಾರ ನಡೆದ ಐಪಿಎಲ್‌ನ ಕೊನೆಯ ಲೀಗ್ ಪಂದ್ಯದಲ್ಲಿ ಬೆಂಗಳೂರು ತಂಡ ಆರು ವಿಕೆಟ್‌ಗಳಿಂದ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಮೊದಲ ಕ್ವಾಲಿಫೈಯರ್ ಆಡುವ ಅವಕಾಶ ಪಡೆಯಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಲಖನೌ ತಂಡ ಪಂತ್ ಅಮೋಘ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ 18.4 ಓವರ್‌ಗಳಲ್ಲಿ ಕೇವಲ 4 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿ ಗೆದ್ದು ಬೀಗಿದೆ.
ಪಾಯಿಂಟ್ ಪಟ್ಟಿಯಲ್ಲಿ ಕ್ರಮವಾಗಿ ಮೊದಲ ಎರಡು ಸ್ಥಾನ ಪಡೆದ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇದೇ 29ರಂದು ನಡೆಯುವ ಮೊದಲ ಕ್ವಾಲಿಫೈಯರ್‌ನಲ್ಲಿ ಎದುರಾಗಲಿವೆ.
ಶುಕ್ರವಾರ ನಡೆಯುವ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.