ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 61ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೈಂಟ್ಸ್(ಎಲ್‌ಎಸ್‌ಜಿ) ತಂಡವು ಆರಂಭಿಕ ಆಟಗಾರರ ಉತ್ತಮ ಪ್ರದರ್ಶನದ ನೆರವಿನಿಂದ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದೆ.
ಆರಂಭಿಕ ಆಟಗಾರರಾದ ಮಿಚೆಲ್ ಮಾರ್ಶ್ (65 ರನ್, 39 ಎಸೆತ) ಹಾಗೂ ಏಡನ್ ಮಾಕ್ರಂ(61 ರನ್, 38 ಎಸೆತ) ಅವರು ಮೊದಲ ವಿಕೆಟ್‌ಗೆ 115 ರನ್‌ಗಳ ಬೃಹತ್ ಜೊತೆಯಾಟ ಆಡುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು. ಹರ್ಷ್ ದುಬೆಯವರು ಮಾರ್ಷ್ ವಿಕೆಟ್ ಪಡೆಯುವ ಮೂಲಕ ಈ ಜೊತೆಯಾಟವನ್ನು ಮುರಿದರು.
ಗೆಲ್ಲಲೇ ಬೇಕಾದ ಪಂದ್ಯದಲ್ಲೂ ನಾಯಕ ರಿಷಭ್ ಪಂತ್ ಕೇವಲ 7(6 ಎಸೆತ) ರನ್‌ಗಳಿಸಿ ಈಶಾನ್ ಮಾಲಿಂಗಗೆ ವಿಕೆಟ್ ಒಪ್ಪಿಸುವ ಮೂಲಕ, ಈ ಸೀಜನ್‌ನಲ್ಲಿ ತಮ್ಮ ಕಳಪೆ ಫಾರ್ಮ್ ಮುಂದುವರಿಸಿದ್ದಾರೆ.
ಇನ್ನಿಂಗ್ಸ್‌ನ ಕೊನೆಯಲ್ಲಿ ನಿಕೋಲಸ್ ಪೂರನ್ 45 ರನ್ (26ಎಸೆತ) ಸಮಯೋಚಿತ ಆಟವಾಡುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಸನ್‌ರೈಸರ್ಸ್ ಪರ ಹರ್ಷಲ್ ಪಟೇಲ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ತಲಾ 3 ಪಡೆದು ಮಿಂಚಿದರು.
ಸನ್ ರೈಸರ್ಸ್ ಹೈದರಾಬಾದ್ ತಂಡವು 206 ರನ್ ಗುರಿಯನ್ನು ಬೆನ್ನತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.