ಮಹೇಂದ್ರ ಸಿಂಗ್ ಧೋನಿ
(ಪಿಟಿಐ ಚಿತ್ರ)
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಅತ್ಯಂತ ಹಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಮಹೇಂದ್ರ ಸಿಂಗ್ ಧೋನಿ ಭಾಜನರಾಗಿದ್ದಾರೆ.
ಇಂದಿಗೆ (ಶುಕ್ರವಾರ) ಧೋನಿ ವಯಸ್ಸು 43 ವರ್ಷ 278 ದಿನ. ಅಲ್ಲದೆ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಪಟ್ಟವನ್ನು ಮತ್ತೆ ವಹಿಸಿಕೊಂಡಿದ್ದಾರೆ.
ಚೆನ್ನೈನ ಎಂ. ಚಿದಂಬರಂ ಮೈದಾನದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ನಡೆಯುತ್ತಿರುವ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು ಧೋನಿ ಮುನ್ನಡೆಸುತ್ತಿದ್ದಾರೆ.
2023ರಲ್ಲಿ ಧೋನಿ ಕೊನೆಯದಾಗಿ ಸಿಎಸ್‌ಕೆ ತಂಡದ ನಾಯಕತ್ವ ವಹಿಸಿದ್ದರು. ಅಂದು ಚೆನ್ನೈ ಚಾಂಪಿಯನ್ ಆಗಿತ್ತು.
ಐದು ಬಾರಿಯ ಐಪಿಎಲ್ ಚಾಂಪಿಯನ್ ಧೋನಿ, ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.