ಜೈಪುರ: ಇಲ್ಲಿನ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸುವ ಮೂಲಕ ಪಂಜಾಬ್ ಕಿಂಗ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ.
ಟಾಸ್ ಗೆದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 184 ರನ್ ಗಳಿಸಿತು.
ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಪಂಜಾಬ್, 18.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 187 ರನ್ ಕಲೆ ಹಾಕಿತು. ಈ ಮೂಲಕ ಪಂಜಾಬ್ ಕಿಂಗ್ಸ್ ಆಡಿದ 14 ಪಂದ್ಯಗಳಲ್ಲಿ 9 ಜಯ ಸಾಧಿಸಿ 19 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.