ರಾಯಲ್ ಚಾಲೆಂಜರ್ಸ್ ಬೆಂಗಳೂರು
(ಪಿಟಿಐ ಚಿತ್ರ)
ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಎದುರಾದ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಲ್ಲಿ ಕಳಪೆ ಸಾಧನೆಗೆ ಗುರಿಯಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನ ಅಂಗಳ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 45ನೇ ಸೋಲಿನ ಮುಖಭಂಗಕ್ಕೊಳಗಾಗಿದೆ.
ಆ ಮೂಲಕ ಐಪಿಎಲ್ ಇತಿಹಾಸದಲ್ಲೇ ನಿರ್ದಿಷ್ಟ ತಾಣವೊಂದರಲ್ಲಿ ಅತಿ ಹೆಚ್ಚು ಸೋಲಿಗೆ ಒಳಗಾಗಿರುವ ತಂಡವೆಂಬ ಅಪಖ್ಯಾತಿಗೆ ಒಳಗಾಗಿದೆ. ಬೆಂಗಳೂರು ಮೈದಾನದಲ್ಲಿ ಆರ್‌ಸಿಬಿಯ ಗೆಲುವು-ಸೋಲಿನ ಅನುಪಾತ 0.977 ಆಗಿದೆ.
ಈ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದ್ದು, ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ 44 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ.
ಇನ್ನು ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಈಡನ್ ಗಾರ್ಡನ್ಸ್ ಮೈದಾನದಲ್ಲಿ 38 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ.
ಪ್ರಸಕ್ತ ಸಾಲಿನಲ್ಲೂ ತವರಿನ ಅಂಗಣದಲ್ಲಿ ಆರ್‌ಸಿಬಿಯ ಕೆಟ್ಟ ಪ್ರದರ್ಶನ ಮುಂದುವರಿದಿದೆ. ಆಡಿರುವ ಎರಡೂ ಪಂದ್ಯಗಳಲ್ಲಿ ಪರಾಭವ ಕಂಡಿದೆ. ಗುಜರಾತ್ ಟೈಟನ್ಸ್ ವಿರುದ್ಧ ಎಂಟು ವಿಕೆಟ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.