ಗುಜರಾತ್ ಟೈಟನ್ಸ್ ನಾಯಕ ಶುಭಮನ್ ಗಿಲ್
ರಾಯಿಟರ್ಸ್ ಚಿತ್ರ
ಜೈಪುರ: ಅಗ್ರ ಕ್ರಮಾಂಕದ ಬ್ಯಾಟರ್‌ಗಳ ಅಮೋಘ ಬ್ಯಾಟಿಂಗ್ ಬಲದಿಂದ ಗುಜರಾತ್ ಟೈಟನ್ಸ್ ತಂಡವು ಆತಿಥೇಯ ರಾಜಸ್ಥಾನ ರಾಯಲ್ಸ್ ಗೆಲುವಿಗೆ ಸವಾಲಿನ ಗುರಿ ನೀಡಿದೆ.
ಇಲ್ಲಿನ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.
ಟಾಸ್ ಗೆದ್ದ ರಾಜಸ್ಥಾನ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಬ್ಯಾಟಿಂಗ್ ಶುರು ಮಾಡಿದ ಟೈಟನ್ಸ್, ನಿಗದಿತ ಓವರ್‌ಗಳಲ್ಲಿ 4 ವಿಕೆಟ್‌ಗೆ 209 ರನ್ ಕಲೆಹಾಕಿದೆ. ಈ ತಂಡಕ್ಕೆ ನಾಯಕ ಶುಭಮನ್ ಗಿಲ್ ಮತ್ತು ಭರವಸೆಯ ಬ್ಯಾಟರ್ ಸಾಯಿ ಸುದರ್ಶನ್ ಮೊದಲ ವಿಕೆಟ್‌ಗೆ 93 ರನ್‌ಗಳ ಜೊತೆಯಾಟವಾಡಿದರು.
'ಆರೆಂಜ್ ಕ್ಯಾಪ್' ರೇಸ್‌ನಲ್ಲಿ ಅಗ್ರಸ್ಥಾನದಲ್ಲಿರುವ ಸುದರ್ಶನ್ (30 ಎಸೆತಗಳಲ್ಲಿ 39 ರನ್) ಗಳಿಸಿ ಔಟಾದರು. ಬಳಿಕ ಜೊತೆಯಾದ ನಾಯಕ ಹಾಗೂ ಜೋಶ್ ಬಟ್ಲರ್, 6.2 ಓವರ್‌ಗಳಲ್ಲಿ 74 ರನ್ ಸೇರಿಸಿದರು.
50 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಹಾಗೂ ಐದು ಬೌಂಡರಿ ಸಹಿತ 84 ಬಾರಿಸಿದ್ದ ಗಿಲ್, ಶತಕದ ಹೊಸ್ತಿಲಲ್ಲಿ ವಿಕೆಟ್ ಒಪ್ಪಿಸಿದರು. ಆರಂಭಿಕರಿಬ್ಬ ವಿಕೆಟ್‌ಗಳು ಮಹೀಷ ತೀಕ್ಷಣ ಪಾಲಾದವು. ಕೊನೆವರೆಗೂ ಆಡಿದ ಬಟ್ಲರ್ ಕೇವಲ 26 ಎಸೆತಗಳಲ್ಲಿ 50 ರನ್ (3 ಬೌಂಡರಿ, 4 ಸಿಕ್ಸ್) ಚಚ್ಚಿದರು.
ರಾಜಸ್ಥಾನ ಪರ ತೀಕ್ಷಣ ಎರಡು ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್ ಮತ್ತು ಸಂದೀಪ್ ಶರ್ಮಾ ಒಂದೊಂದು ವಿಕೆಟ್ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.