
ವಿರಾಟ್ ಕೊಹ್ಲಿ
(ಪಿಟಿಐ ಚಿತ್ರ)
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರನ್ ಮೆಶಿನ್ ಖ್ಯಾತಿಯ ವಿರಾಟ್ ಕೊಹ್ಲಿ, ವಿಶಿಷ್ಟ ದಾಖಲೆ ಬರೆದಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿ ಗಳಿಸಿದ ಬ್ಯಾಟರ್ ಎಂಬ ಖ್ಯಾತಿಗೆ ವಿರಾಟ್ ಭಾಜನರಾಗಿದ್ದಾರೆ. 259 ಇನಿಂಗ್ಸ್‌ಗಳಲ್ಲಿ ಕೊಹ್ಲಿ ಈವರೆಗೆ 771 ಬೌಂಡರಿಗಳನ್ನು ಗಳಿಸಿದ್ದಾರೆ.
ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ವಿರಾಟ್, ಅಹಮದಾಬಾದ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಶಿಖರ್ ಧವನ್ (768 ಬೌಂಡರಿ, 221 ಇನಿಂಗ್ಸ್) ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿ ಗಳಿಸಿದ ಬ್ಯಾಟರ್‌ಗಳ ಪಟ್ಟಿ:
ವಿರಾಟ್ ಕೊಹ್ಲಿ: 771
ಶಿಖರ್ ಧವನ್: 768
ಡೇವಿಡ್ ವಾರ್ನರ್: 663
ರೋಹಿತ್ ಶರ್ಮಾ: 640
ಅಜಿಂಕ್ಯ ರಹಾನೆ: 514
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.