ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ
(ಪಿಟಿಐ ಚಿತ್ರ)
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ಮೊದಲ ಪಂದ್ಯಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಲಿದ್ದಾರೆ.
ಕಳೆದ ಆವೃತ್ತಿಯಲ್ಲಿ ಮೂರು ಸಲ ನಿಧಾನಗತಿಯ ಓವರ್‌ರೇಟ್‌ಗಾಗಿ ಹಾರ್ದಿಕ್ ಒಂದು ಪಂದ್ಯದ ನಿಷೇಧಕ್ಕೊಳಗಾಗಿದ್ದರು.
ಮಾರ್ಚ್ 23, ಭಾನುವಾರ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಈ ಪಂದ್ಯವು ಚೆನ್ನೈನ ಎಂ. ಚಿದಂಬರಂ ಮೈದಾನದಲ್ಲಿ ನಡೆಯಲಿದೆ.
ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ಪಾಂಡ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. 'ಸೂರ್ಯಕುಮಾರ್ ಟೀಮ್ ಇಂಡಿಯಾದ ಟಿ20 ತಂಡದ ನಾಯಕರೂ ಆಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲು ಯೋಗ್ಯ ಆಯ್ಕೆಯಾಗಿದ್ದಾರೆ' ಎಂದು ತಿಳಿಸಿದ್ದಾರೆ.
2024ರ ಸಾಲಿನಲ್ಲಿ ರೋಹಿತ್ ಶರ್ಮಾ ಅವರ ಬದಲು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. ಅಲ್ಲದೆ ಅಭಿಮಾನಿಗಳಿಂದ ಗೇಲಿಗೆ ಒಳಗಾಗಿದ್ದರು. ತಂಡವು ಕಳಪೆ ಪ್ರದರ್ಶನವನ್ನು ನೀಡಿತ್ತು. 10 ಪಂದ್ಯಗಳಲ್ಲಿ ಸೋಲು ಕಂಡಿದ್ದರೆ ಕೇವಲ ನಾಲ್ಕು ಪಂದ್ಯಗಳಲ್ಲಷ್ಟೇ ಗೆಲುವು ಸಾಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.