
ಬೆಂಗಳೂರು: ಭಾರತ ತಂಡದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡದಿಂದ ಲಖನೌ ಸೂಪರ್‌ಜೈಂಟ್ಸ್ ಫ್ರಾಂಚೈಸಿ ನಗದು ವಹಿವಾಟಿನ ಮೂಲಕ ತಂಡಕ್ಕೆ ಸೇರಿಸಿಕೊಂಡಿದೆ.
ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಮೊಹಮ್ಮದ್ ಶಮಿ ಅವರನ್ನು ಎಸ್‌ಆರ್‌ಎಚ್ ಫ್ರಾಂಚೈಸಿ ₹10 ಕೋಟಿ ಕೊಟ್ಟು ಖರೀದಿಸಿತ್ತು. ಇದೀಗ ಅಷ್ಟೇ ಹಣವನ್ನು ನೀಡಿ ಎಲ್‌ಎಸ್‌ಜಿ ನಗದು ವಹಿವಾಟಿನ ಮೂಲಕ ತಂಡಕ್ಕೆ ಸೇರಿಸಿಕೊಂಡಿದೆ.
2013ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಶಮಿ ಇದುವರೆಗೂ 119 ಐಪಿಎಲ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 133 ವಿಕೆಟ್ ಪಡೆದಿದ್ದಾರೆ. ಇದುವರೆಗೆ 5 ಫ್ರಾಂಚೈಸಿಗಳ ಪರ ಆಡಿರುವ ಅವರು ಗುಜರಾತ್ ಟೈಟನ್ಸ್‌ನಲ್ಲಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
2023ರಲ್ಲಿ ಗುಜರಾತ್ ಪರ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದ ಶಮಿ, 17 ಪಂದ್ಯಗಳಲ್ಲಿ 28 ವಿಕೆಟ್ ಪಡೆದು ನೇರಳೆ ಬಣ್ಣದ ಕ್ಯಾಪ್ (Purpal Cap) ಗೆದ್ದಿದ್ದರು.
ಯಾವೆಲ್ಲಾ ತಂಡದ ಪರ ಆಡಿದ್ದಾರೆ?
2013ರಲ್ಲಿ ತಮ್ಮ ಐಪಿಎಲ್ ಅಭಿಯಾನ ಆರಂಭಿಸಿದ ಮೊಹಮ್ಮದ್ ಶಮಿ, ಇದುವರೆಗೂ ಐದು ಫ್ರಾಂಚೀಸಿಗಳ ಪರವಾಗಿ ಆಡಿದ್ದಾರೆ. ಕೊಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್), ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ), ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಗುಜರಾತ್ ಟೈಟನ್ಸ್ (ಜಿಟಿ) ಮತ್ತು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡಗಳ ಪರ ಆಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.