
ಪಂಜಾಬ್ ಕಿಂಗ್ಸ್ ತಂಡದ ಆಟಗಾರರು –ಪಿಟಿಐ ಚಿತ್ರ
ಲಖನೌ: ಮುಂದಿನ ತಿಂಗಳು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಮುನ್ನ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತಮ್ಮ ತಂಡದಿಂದ ಬಿಡುಗಡೆ ಮಾಡಲಿರುವ ನಾಲ್ವರು ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.
ಆಸ್ಟ್ರೇಲಿಯಾದ ಆಲ್‌ರೌಂಡರ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಆರನ್ ಹಾರ್ಡಿ ಹಾಗೂ ದೇಶೀಯ ಆಟಗಾರರಾದ ಕುಲದೀಪ್ ಸೇನ್ ಮತ್ತು ವಿಷ್ಣು ವಿನೋದ್ ಅವರನ್ನು ಬಿಡುಗಡೆ ಮಾಡಿದೆ.
ಐಪಿಎಲ್ 18ನೇ ಆವೃತಿಯಲ್ಲಿ ಮ್ಯಾಕ್ಸ್‌ವೆಲ್ ನೀರಸ ಪ್ರದರ್ಶನ ನೀಡಿದ್ದರು. ಅವರು ಆಡಿದ್ದ 7 ಪಂದ್ಯಗಳಿಂದ ಕೇವಲ 48 ರನ್ ಗಳಿಸಿದ್ದರು. ಬೌಲಿಂಗ್‌ನಲ್ಲಿ 4 ವಿಕೆಟ್ ಪಡೆದುಕೊಂಡಿದ್ದರು.
ಕಳೆದ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ₹1.25 ಕೋಟಿಗೆ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿದ್ದ ಹಾರ್ಡಿ ಆಡುವ ಅವಕಾಶ ಪಡೆದಿರಲಿಲ್ಲ. ಇದೀಗ ಅವರನ್ನು ಡಿಸೆಂಬರ್ 16ರಂದು ಅಬುಧಾಬಿಯಲ್ಲಿ ನಡೆಯಲಿರುವ ಮಿನಿ ಹರಾಜಿಗೆ ಮುನ್ನ ತಂಡದಿಂದ ಬಿಡುಗಡೆ ಮಾಡಲಾಗಿದೆ ಎಂದು ಐಪಿಎಲ್ ಮೂಲಗಳು ದೃಢಪಡಿಸಿವೆ.
ಕಳೆದ ಐಪಿಎಲ್‌ನಲ್ಲಿ ಪಿಬಿಕೆಎಸ್ ತಂಡದ ಭಾಗವಾಗಿದ್ದ ಬಲಗೈ ವೇಗಿ ಸೇನ್ ಮತ್ತು ವಿಕೆಟ್ ಕೀಪರ್, ಬ್ಯಾಟರ್ ವಿನೋದ್ ಇಬ್ಬರೂ 2025ರ ಆವೃತ್ತಿಯಲ್ಲಿ ತಂಡದ ಪರ ಯಾವುದೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಈ ಇಬ್ಬರನ್ನೂ ಕೂಡ ತಂಡದಿಂದ ಬಿಡುಗಡೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.