
ಹೈದರಾಬಾದ್: 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸತತ ಮೂರನೇ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಹಾಗೂ ವೇಗಿ ಪ್ಯಾಟ್ ಕಮಿನ್ಸ್ ಅವರೇ ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ದೃಢಪಡಿಸಿದೆ.
ಈ ಕುರಿತು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಎಸ್‌ಆರ್‌ಎಚ್, ಕಮಿನ್ಸ್ ಅವರ ಚಿತ್ರಗಳನ್ನು ಹಂಚಿಕೊಂಡು, ಮತ್ತೊಮ್ಮೆ ನಾಯಕ ಎಂದು ಬರೆದುಕೊಂಡಿದೆ.
ಸದ್ಯ, ಬೆನ್ನು ನೋವಿನಿಂದ ಬಳಲುತ್ತಿರುವ ಕಮಿನ್ಸ್, ಆ್ಯಷಸ್ ಟೆಸ್ಟ್‌ನ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಆದರೆ, ಬ್ರಿಸ್ಬೇನ್‌ನಲ್ಲಿ ನಡೆಯಲಿರುವ 2ನೇ ಪಂದ್ಯಕ್ಕೆ ತಂಡಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. ಮೊದಲ ಪಂದ್ಯವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ.
ಆಸ್ಟ್ರೇಲಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು 2023ರ ಏಕದಿನ ವಿಶ್ವಕಪ್ ಗೆಲ್ಲಿಸಿಕೊಟ್ಟ ಕಮಿನ್ಸ್ ಅವರನ್ನು 2024ರ ಐಪಿಎಲ್ ಹರಾಜಿನಲ್ಲಿ ಎಸ್‌ಆರ್‌ಎಚ್ ಫ್ರಾಂಚೈಸಿ ಬರೋಬ್ಬರಿ ₹20.50 ಕೋಟಿ ನೀಡಿ ಖರೀದಿಸಿತ್ತು. ಬಳಿಕ ಅವರಿಗೆ ನಾಯಕತ್ವ ಜವಾಬ್ದಾರಿ ನೀಡಿತ್ತು. ಕಮಿನ್ಸ್ ಎಸ್‌ಆರ್‌ಎಚ್ ಸೇರುವುದಕ್ಕೆ ಮೊದಲು ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.