ಕೋಲ್ಕತ್ತ: ಆಸ್ಟ್ರೇಲಿಯಾ ಕ್ರಿಕೆಟಿಗ ಕ್ರಿಸ್ ಲಿನ್ ಅವರು ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮಾರಾಟವಾದ ಮೊದಲ ಆಟಗಾರ ಎನಿಸಿದ್ದಾರೆ.
ಇದೇ ಮೊದಲ ಬಾರಿಗೆ ಕೋಲ್ಕತ್ತದಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆಯಲ್ಲಿ ಲಿನ್ ತಮ್ಮ ಮೂಲ ಬೆಲೆ ₹ 2 ಕೋಟಿಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದಾರೆ.
ಇದನ್ನೂ ಓದಿ:ಐಪಿಎಲ್ ಹರಾಜು | ಬರೋಬ್ಬರಿ ₹ 15 ಕೋಟಿಗೆ ಮಾರಾಟವಾದ ಪ್ಯಾಟ್ ಕಮಿನ್ಸ್
ಹರಾಜು ಪ್ರಕ್ರಿಯೆ ಮುಂದುವರಿದಿದ್ದು, ಕನ್ನಡಿಗ ರಾಬಿನ್ ಉತ್ತಪ್ಪ ₹ 3 ಕೋಟಿಗೆ ರಾಜಸ್ಥಾನ ರಾಯಲ್ಸ್ ತಂಡ ಸೇರಿಕೊಂಡಿದ್ದಾರೆ. ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಅವರನ್ನು ಶಾರುಖ್ ಖಾನ್ ಮಾಲೀಕತ್ವದ ಕೋಲ್ಕತ್ತ ನೈಟ್ ರೈಡರ್ ಪ್ರಾಂಚೈಸ್₹ 5.25 ಕೋಟಿಗೆ ಖರೀದಿಸಿದೆ.
ವಿವಿಧ ತಂಡಗಳಿಗೆ ಮಾರಾಟವಾದ ಆಟಗಾರರು (ಬೆಲೆ ಕೋಟಿಗಳಲ್ಲಿ)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.