
ಅಡಿಲೇಡ್: ಐಪಿಎಲ್‌ನ 19ನೇ ಆವೃತ್ತಿಯಲ್ಲಿ ನಾನು ಬೌಲಿಂಗ್ ಮಾಡಲು ಸಿದ್ಧನಿದ್ದೇನೆ ಎಂದು ಆಸ್ಟ್ರೇಲಿಯಾ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಡಿ.16ರಂದು ಐಪಿಎಲ್–2026ರ ಮಿನಿ ಹರಾಜು ಪ್ರಕಿಯೆ ಅಬುಧಾಬಿಯಲ್ಲಿ ಜರುಗಲಿದೆ.
‘ಮಿನಿ ಹರಾಜಿನಲ್ಲಿ ನೋಂದಾಣಿ ಮಾಡುವಾಗ ಮ್ಯಾನೇಜರ್ ತಪ್ಪಿನಿಂದಾಗಿ ‘ಬ್ಯಾಟರ್’ ಪಟ್ಟಿಯಲ್ಲಿ ನನ್ನ ಹೆಸರನ್ನು ಸೇರಿಸಿದ್ದಾರೆ. ಇದು ಅವರಿಂದಾದ ತಪ್ಪು’ ಎಂದು ಗ್ರೀನ್ ಆರೋಪಿಸಿದ್ದಾರೆ.
ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಗ್ರೀನ್, ಜೂನ್‌ನಲ್ಲಿ ಕೇವಲ ಬ್ಯಾಟರ್ ಆಗಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದರು. ಆದರೆ, ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆ್ಯಷಸ್ ಸರಣಿಯಲ್ಲಿ ಅವರು ಬೌಲಿಂಗ್ ಮಾಡುತ್ತಿದ್ದಾರೆ.
ಈ ಬಾರಿಯ ಮಿನಿ ಹರಾಜಿನಲ್ಲಿ ₹2 ಕೋಟಿ ಮೂಲಬೆಲೆ ಹೊಂದಿರುವ ಗ್ರೀನ್, ಅತಿ ಹೆಚ್ಚು ಮೊತ್ತಕ್ಕೆ ಹರಾಜಾಗುವ ನಿರೀಕ್ಷೆಯಲ್ಲಿದ್ದಾರೆ.
26 ವರ್ಷದ ಗ್ರೀನ್, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.