ADVERTISEMENT

ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್: ಮೂವರ ಬಂಧನ, ₹‌‌4.20ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 9:57 IST
Last Updated 9 ಏಪ್ರಿಲ್ 2019, 9:57 IST
   

ಮಂಗಳೂರು: ಐಪಿಎಲ್ ಕ್ರಿಕೆಟ್‌ ಪಂದ್ಯಾವಳಿಯ ಸಂದರ್ಭದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ಬಂಧಿಸಿರುವ ನಗರ ಅಪರಾಧ ಘಟಕದ (ಸಿಸಿಬಿ) ಪೊಲೀಸರು, ₹ 4.20 ಲಕ್ಷ ನಗದು ಮತ್ತು ಐದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

'ಅಶೋಕ್, ಸಂತೋಷ್ ಮತ್ತು ಸುನೀಲ್ ಬಂಧಿತರು. ಇವರು ಬರ್ಕೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸ್ತವ್ಯ ಹೂಡಿಕೊಂಡು ಬೆಟ್ಟಿಂಗ್ ನಡೆಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಸೋಮವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ' ಎಂದು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಅರುಣ್ ಮತ್ತು ಕಿರಣ್ ಎಂಬುವವರು ಈ ಜಾಲದ ಪ್ರಮುಖ ಬುಕ್ಕಿಗಳು. ಇಬ್ಬರೂ ದುಬೈನಲ್ಲಿದ್ದಾರೆ.ಅವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳು ಮತ್ತು ವಶಪಡಿಸಿಕೊಂಡ ಸ್ವತ್ತುಗಳನ್ನು ಬರ್ಕೆ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.