ADVERTISEMENT

IPL-2020 | RCB vs RR: ಪಂದ್ಯ ಗೆದ್ದು ಅಗ್ರಸ್ಥಾನಕ್ಕೇರಿದ ಆರ್‌ಸಿಬಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 16:45 IST
Last Updated 3 ಅಕ್ಟೋಬರ್ 2020, 16:45 IST
   

ಅಬುಧಾಬಿ: ರಾಜಸ್ಥಾನ ರಾಯಲ್ಸ್‌ ನೀಡಿದ ಸವಾಲಿನ ಗುರಿ ಎದುರು ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ ಆರ್‌ಸಿಬಿ ಇನ್ನೂ 5 ಎಸೆತಗಳು ಬಾಕಿ ಇರುವಂತೆಯೇ 8 ವಿಕೆಟ್‌ ಅಂತರದಿಂದ ಗೆದ್ದು ಬೀಗಿತು. ಈ ಜಯದೊಂದಿಗೆ ಆರ್‌ಸಿಬಿ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 154 ರನ್‌ ಗಳಿಸಿತ್ತು. ಈ ಗುರಿ ಎದುರು ಆರ್‌ಸಿಬಿಯಯುವ ಪ್ರತಿಭೆ ದೇವದತ್ತ ಪಡಿಕ್ಕಲ್‌ ಮತ್ತು ನಾಯಕ ವಿರಾಟ್‌ ಕೊಹ್ಲಿನಿರಾಯಾಸವಾಗಿ ಬ್ಯಾಟ್‌ ಬೀಸಿದರು.

45 ಎಸೆತಗಳನ್ನು ಎದುರಿಸಿದ ಪಡಿಕ್ಕಲ್‌ 1 ಸಿಕ್ಸರ್‌ ಮತ್ತು 6 ಬೌಂಡರಿ ಸಹಿತ 63 ರನ್‌ ಗಳಿಸಿ ಔಟಾದರೆ, ಕೊನೆವರೆಗೂ ಆಡಿದ ಕೊಹ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು. 52 ಎಸೆತಗಳನ್ನು ಎದುರಿಸಿದ ಕೊಹ್ಲಿ2 ಸಿಕ್ಸರ್‌, 7 ಬೌಂಡರಿ ಸಹಿತ 72 ರನ್ಬಾರಿಸಿದರು. ಇದು ಐಪಿಎಲ್‌ನಲ್ಲಿ ಅವರು ಗಳಿಸಿಕೊಂಡ 37ನೇ ಅರ್ಧಶತಕ.

ADVERTISEMENT

ಇದರೊಂದಿಗೆ ಆರ್‌ಸಿಬಿ ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿಪಾಯಿಂಟ್‌ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ. ರಾಜಸ್ಥಾನ 5ರಿಂದ 6ನೇ ಸ್ಥಾನಕ್ಕೆ ಕುಸಿದಿದೆ.

ಆರ್‌ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ಅ.5ರಂದುಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಆಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.