ADVERTISEMENT

ಭಾರತದಲ್ಲಿಯೇ ಐಪಿಎಲ್ ಆಯೋಜನೆ: ಐಪಿಎಲ್ ಚೇರ್ಮನ್ ಅರುಣ್ ಧುಮಾಲ್

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಸ್ಥಳಾಂತರಿಸುವುದಿಲ್ಲ ಎಂದು ಐಪಿಎಲ್ ಚೇರ್ಮನ್ ಅರುಣ್ ಧುಮಾಲ್ ಹೇಳಿದ್ದಾರೆ.

ಪಿಟಿಐ
Published 16 ಮಾರ್ಚ್ 2024, 15:55 IST
Last Updated 16 ಮಾರ್ಚ್ 2024, 15:55 IST
<div class="paragraphs"><p>ಐಪಿಎಲ್ ಚೇರ್ಮನ್ ಅರುಣ್ ಧುಮಾಲ್</p></div>

ಐಪಿಎಲ್ ಚೇರ್ಮನ್ ಅರುಣ್ ಧುಮಾಲ್

   

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಸ್ಥಳಾಂತರಿಸುವುದಿಲ್ಲ ಎಂದು ಐಪಿಎಲ್ ಚೇರ್ಮನ್ ಅರುಣ್ ಧುಮಾಲ್ ಹೇಳಿದ್ದಾರೆ. 

ಏಪ್ರಿಲ್ 19ರಿಂದ ಜೂನ್ 1ರವರೆಗೆ ಚುನಾವಣೆ ನಡೆಯಲಿವೆ.  

ADVERTISEMENT

‘ಐಪಿಎಲ್ ಟೂರ್ನಿಯನ್ನು ಎಲ್ಲಿಗೂ ಸ್ಥಳಾಂತರ ಮಾಡುವುದಿಲ್ಲ. ಈಗಾಗಲೇ ಮೊದಲ ಎರಡು ವಾರಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ. ಅದೇ ರೀತಿ ನಡೆಯಲಿದೆ. ಉಳಿದ ಪಂದ್ಯಗಳ ವೇಳಾಪಟ್ಟಿಯನ್ನೂ ಶೀಘ್ರದಲ್ಲಿಯೇ ಬಿಡುಗಡೆ ಮಾಡುತ್ತೇವೆ’ ಎಂದು ಧುಮಾಲ್ ಸ್ಪಷ್ಟಪಡಿಸಿದ್ದಾರೆ. 

ಇದೇ 22ರಂದು ಟೂರ್ನಿ ಆರಂಭವಾಗಲಿದೆ. ಚೆನ್ನೈನಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ.

 2019ರಲ್ಲಿ ಚುನಾವಣೆ ಸಂದರ್ಭಧಲ್ಲಿ ಮಾಡಿದ್ದಂತೆ ಈ ಬಾರಿಯೂ ಪೂರ್ಣ ಐಪಿಎಲ್ ಟೂರ್ನಿಯನ್ನು ಭಾರತದಲ್ಲಿಯೇ ನಡೆಸಲಾಗುವುದು ಎಂದು ಈಚಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.