ADVERTISEMENT

ಮುಂದಿನ ಐಪಿಎಲ್‌ನಲ್ಲಿ 10 ತಂಡಗಳು?

ಏಜೆನ್ಸೀಸ್
Published 3 ಡಿಸೆಂಬರ್ 2020, 19:30 IST
Last Updated 3 ಡಿಸೆಂಬರ್ 2020, 19:30 IST
ಬಿಸಿಸಿಐ
ಬಿಸಿಸಿಐ   

ನವದೆಹಲಿ: ಮುಂದಿನ ವರ್ಷ ನಡೆಯಲಿರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯಲ್ಲಿ ಎರಡು ಹೆಚ್ಚುವರಿ ತಂಡಗಳನ್ನು ಸೇರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಚಿಂತನೆ ನಡೆಸಿದೆ. ಈ ತಿಂಗಳ 24ರಂದು ನಡೆಯಲಿರುವ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಖಚಿತಪಡಿಸಿದ್ದಾರೆ.

ಕೋವಿಡ್–19 ಆತಂಕದಿಂದ ಮೂರು ಬಾರಿ ಮುಂದೂಡಿದ ನಂತರ 13ನೇ ಆವೃತ್ತಿಯ ಟೂರ್ನಿಯನ್ನು ಯುಎಇಯ ಮೂರು ಕ್ರಿಡಾಂಗಣಗಳಲ್ಲಿ ಇತ್ತೀಚೆಗೆ ನಡೆಸಲಾಗಿತ್ತು. ಪ್ರೇಕ್ಷಕರಿಗೆ ಅಂಗಣಕ್ಕೆ ಪ್ರವೇಶ ನಿಷೇಧಿಸಲಾಗಿದ್ದರೂ ಟಿವಿ ಪರದೆಯಲ್ಲಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಪಂದ್ಯಗಳನ್ನು ವೀಕ್ಷಿಸಿದ್ದರು. ಅದಾನಿ ಗ್ರೂಪ್ ಮತ್ತು ಆರ್‌ಪಿ ಸಂಜೀವ್ ಗೋಯೆಂಕಾ ಗ್ರೂಪ್ ತಂಡಗಳನ್ನು ಕಣಕ್ಕೆ ಇಳಿಸಲು ಆಸಕ್ತಿ ತೋರಿಸಿವೆ ಎಂದು ಹೇಳಲಾಗಿದೆ. ಗೋಯೆಂಕಾ ಗ್ರೂಪ್ ಈ ಹಿಂದೆ ಎರಡು ಆವೃತ್ತಿಗಳಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡವನ್ನು ಐಪಿಎಲ್‌ನಲ್ಲಿ ಆಡಿಸಿತ್ತು.

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರಿಸುವ ಕುರಿತು ಕೂಡ ಬಿಸಿಸಿಐ ಸಭೆಯಲ್ಲಿ ಚರ್ಚೆ ನಡೆಯಲಿದೆ. 1900ರ ಒಲಿಂಪಿಕ್ಸ್‌ನಲ್ಲಿ ಮತ್ತು 1998ರ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಕ್ರಿಕೆಟ್ ಇತ್ತು. 2022ರ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್ ಸೇರಿಸಲು ಈಗಾಗಲೇ ನಿರ್ಧರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.