ADVERTISEMENT

ಕಳೆದ ವರ್ಷ ಜಸ್ಟ್ ಮಿಸ್ ಆಗಿದ್ದ ವೆಂಕಟೇಶ್ ಅಯ್ಯರ್‌ನ ಬಿಡದೇ ಖರೀದಿಸಿತು RCB

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಡಿಸೆಂಬರ್ 2025, 10:09 IST
Last Updated 16 ಡಿಸೆಂಬರ್ 2025, 10:09 IST
ವೆಂಕಟೇಶ್ ಅಯ್ಯರ್ 
ವೆಂಕಟೇಶ್ ಅಯ್ಯರ್    

ಅಬುಧಾಬಿ: ಇಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2025ನೇ ಸಾಲಿನ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾರತದ ಯುವ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಯಿತು.

ಕಳೆದ ಬಾರಿ ವೆಂಕಟೇಶ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್‌ಸಿಬಿ ಫ್ರಾಂಚೈಸಿ ಕೆಕೆಆರ್ ಜೊತೆ ಕೊನೆವರೆಗೂ ಪೈಪೋಟಿ ನಡೆಸಿತ್ತು. ಅಂತಿಮವಾಗಿ ಅಯ್ಯರ್ ಅವರು ₹23.75 ಕೋಟಿಗೆ ಕೆಕೆಆರ್ ಸೇರಿದ್ದರು.

ಮಿನಿ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸಲು ಆರ್‌ಸಿಬಿ ಹಾಗೂ ಕೆಕೆಆರ್ ಫ್ರಾಂಚೈಸಿಗಳು ಪೈಪೋಟಿ ನಡೆಸಿದವು. ಆದರೆ, ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅವರಿಗೆ ₹7 ಕೋಟಿ ಕೊಟ್ಟು ಖರೀದಿಸಿದೆ. ಆ ಮೂಲಕ ಎಡಗೈ ಬ್ಯಾಟಿಂಗ್ ಆಲ್‌ರೌಂಡರ್‌ ಅನ್ನು ತಂಡಕ್ಕೆ ಸೇರಿಸಿಕೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.