ಕೆ.ಎಲ್. ರಾಹುಲ್
(ಪಿಟಿಐ ಚಿತ್ರ)
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ಸಾರ್ವಕಾಲಿಕ ಅಗ್ರ 10ರ ಪಟ್ಟಿಗೆ ವಿಕೆಟ್ ಕೀಪರ್, ಬಲಗೈ ಬ್ಯಾಟರ್ ಕೆ.ಎಲ್. ರಾಹುಲ್ ಲಗ್ಗೆ ಇಟ್ಟಿದ್ದಾರೆ.
ತಮ್ಮ ಮೆಚ್ಚಿನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಹುಲ್ ಈ ಅಮೋಘ ಸಾಧನೆ ಮಾಡಿದ್ದಾರೆ.
ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕೆ.ಎಲ್. ರಾಹುಲ್, ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಅಮೋಘ ಅರ್ಧಶತಕವನ್ನು ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದು, ಒಟ್ಟು 8,190 ರನ್ ಗಳಿಸಿದ್ದಾರೆ.
10ನೇ ಸ್ಥಾನದಲ್ಲಿರುವ ರಾಹುಲ್ ಈವರೆಗೆ 135 ಪಂದ್ಯಗಳಲ್ಲಿ 4,868 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಶತಕ ಹಾಗೂ 39 ಅರ್ಧಶತಕಗಳು ಸೇರಿವೆ.
ಆರ್‌ಸಿಬಿ ವಿರುದ್ಧ ಅಬ್ಬರಿಸಿದ ರಾಹುಲ್ ಕೇವಲ 53 ಎಸೆತಗಳಲ್ಲಿ 93 ರನ್ ಗಳಿಸಿ ಔಟಾಗದೆ ಉಳಿದಿದ್ದರು. ರಾಹುಲ್ ಇನ್ನಿಂಗ್ಸ್‌ನಲ್ಲಿ ಆರು ಸಿಕ್ಸರ್ ಹಾಗೂ ಏಳು ಬೌಂಡರಿಗಳು ಸೇರಿದ್ದವು.
ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಸರದಾರರು:
ವಿರಾಟ್ ಕೊಹ್ಲಿ: 8,190
ಶಿಖರ್ ಧವನ್: 6,769
ರೋಹಿತ್ ಶರ್ಮಾ: 6,666
ಡೇವಿಡ್ ವಾರ್ನರ್: 6,565
ಸುರೇಶ್ ರೈನಾ: 5,528
ಮಹೇಂದ್ರ ಸಿಂಗ್ ಧೋನಿ: 5,346
ಎಬಿ ಡಿವಿಲಿಯರ್ಸ್: 5,162
ಕ್ರಿಸ್ ಗೇಲ್: 4,965
ರಾಬಿನ್ ಉತ್ತಪ್ಪ: 4,952
ಕೆ.ಎಲ್. ರಾಹುಲ್: 4,868
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.