ADVERTISEMENT

ದಕ್ಷಿಣ ಆಫ್ರಿಕಾ ಸರಣಿ: ವಿರಾಟ್‌ಗೆ ವಿಶ್ರಾಂತಿ?

​ಪ್ರಜಾವಾಣಿ ವಾರ್ತೆ
Published 11 ಮೇ 2022, 15:53 IST
Last Updated 11 ಮೇ 2022, 15:53 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ನವದೆಹಲಿ: ಬ್ಯಾಟಿಂಗ್‌ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ಅವರಿಗೆ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ನೀಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಯ್ಕೆ ಸಮಿತಿಯು ಚಿಂತನೆ ನಡೆಸಿದೆ.

ಕಳೆದ ಎರಡು ತಿಂಗಳುಗಳಿಂದ ಐಪಿಎಲ್‌ ಟೂರ್ನಿಯ ಬಯೋಬಬಲ್‌ನಲ್ಲಿಯೂ ವಿರಾಟ್ ಆಡುತ್ತಿದ್ದಾರೆ. ಆದ್ದರಿಂದ ವಿಶ್ರಾಂತಿ ನೀಡಿದರೆ ಫಾರ್ಮ್‌ ಕಂಡುಕೊಳ್ಳಲು ಅವರಿಗೆ ನೆರವಾಗಬಹುದು ಎನ್ನಲಾಗಿದೆ.

ಜೂನ್ 9ರಿಂದ 19ರವರೆಗೆ ದಕ್ಷಿಣ ಆಫ್ರಿಕಾ ತಂಡವು ಭಾರತದಲ್ಲಿ ಐದು ಟಿ20 ಪಂದ್ಯಗಳನ್ನು ಆಡಲಿದೆ.

ADVERTISEMENT

‘ಅವರು ಸತತವಾಗಿ ಟೂರ್ನಿಗಳಲ್ಲಿ ಆಡಿದ್ಧಾರೆ. ಅಲ್ಲದೇ ಬಯೋಬಬಲ್‌ನಲ್ಲಿ ಬಹಳಷ್ಟು ಸಮಯ ಕಳೆದಿದ್ದಾರೆ. ಆದ್ದರಿಂದ ಅವರಿಗೆ ವಿಶ್ರಾಂತಿ ನೀಡುವುದು ಅಗತ್ಯ. ದಕ್ಷಿಣ ಆಫ್ರಿಕಾ ಸರಣಿಯ ನಂತರ ಭಾರತ ತಂಡವು ಇಂಗ್ಲೆಂಡ್‌ ಪ್ರವಾಸ ಮಾಡಲಿದೆ. ಅಲ್ಲಿ ಐರ್ಲೆಂಡ್ ವಿರುದ್ಧ ಟಿ20 ಸರಣಿ, ಇಂಗ್ಲೆಂಡ್ ಎದುರು ಒಂದು ಟೆಸ್ಟ್ (2021ರ ಸರಣಿಯಲ್ಲಿ ಬಾಕಿ ಉಳಿದಿದ್ದ ಪಂದ್ಯ) ಮತ್ತು ಆರು ಏಕದಿನ ಪಂದ್ಯಗಳನ್ನು ಆಡಲಿದೆ. ಆ ಪ್ರವಾಸಕ್ಕೆ ವಿರಾಟ್ ಸಿದ್ಧತೆ ಮಾಡಿಕೊಳ್ಳುವುದು ಅಗತ್ಯವಾಗಿದೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.