ಲಂಡನ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಜೇಮಿ ಓವರ್ಟನ್ ಅವರು ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರ ನಡೆದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಏಕದಿನ ಪಂದ್ಯದಲ್ಲಿ ಕ್ಯಾಚ್‌ಗೆ ಪ್ರಯತ್ನಿಸುವಾಗ ಕೈ ಬೆರಳು ಮುರಿದ ಕಾರಣ ಇದೀಗ ಏಕದಿನ ಹಾಗೂ ಟಿ-20 ಸರಣಿಯಿಂದ ಹೊರಗುಳಿಯುವಂತಾಗಿದೆ.
ಜೆಮಿ ಓವರ್ಟನ್ ಅವರು ಹೆಚ್ಚಿನ ಚಿಕಿತ್ಸೆಗೆ ತೆರಳಿದ್ದು, ಇಂಗ್ಲೆಂಡ್ ಕ್ರಿಕೆಟ್‌ನ ವೈದ್ಯಕೀಯ ತಂಡದ ನಿಗಾದಲ್ಲಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ಇಸಿಬಿ) ತಿಳಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದ ಮಧ್ಯದಲ್ಲೇ ಗಾಯಗೊಂಡಿದ್ದ ಜೇಮಿ ಓವರ್ಟನ್ ಅವರು ಪ್ರಾಥಮಿಕ ಚಿಕಿತ್ಸೆಯ ನಂತರ ಬೌಲಿಂಗ್ ಮುಂದುವರಿಸಿದ್ದರು.
ಉಳಿದ ಎರಡು ಏಕದಿನ ಪಂದ್ಯಗಳಿಗೆ ಇಂಗ್ಲೆಂಡ್ ತಂಡದಲ್ಲಿ ಓವರ್ಟನ್ ಜಾಗಕ್ಕೆ ಯಾವುದೇ ಬದಲಿ ಆಟಗಾರರನ್ನು ಆಯ್ಕೆ ಮಾಡಿಲ್ಲ ಎಂದು ಇಸಿಬಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.