ADVERTISEMENT

ಐಸಿಸಿ ಏಕದಿನ ರ‍್ಯಾಂಕಿಂಗ್: ಅಗ್ರಸ್ಥಾನಕ್ಕೆ ಜಸ್‌ಪ್ರೀತ್ ಬೂಮ್ರಾ

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 7:24 IST
Last Updated 14 ಜುಲೈ 2022, 7:24 IST
ಜಸ್‌ಪ್ರೀತ್ ಬೂಮ್ರಾ
ಜಸ್‌ಪ್ರೀತ್ ಬೂಮ್ರಾ   

ದುಬೈ: ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಮಂಗಳವಾರ ನಡೆದ ಇಂಗ್ಲೆಂಡ್‌ ಎದುರಿನ ಪಂದ್ಯದಲ್ಲಿ ಅವರು ತಮ್ಮ ಜೀವನಶ್ರೇಷ್ಠ (19ಕ್ಕೆ6) ಸಾಧನೆ ಮಾಡಿದ್ದರು.

ಈ ಹಿಂದೆ ಬೂಮ್ರಾ ಸತತ 730 ದಿನಗಳವರೆಗೆ ಅಗ್ರಸ್ಥಾನದಲ್ಲಿದ್ದರು.ಆದರೆ 2020ರ ಫೆಬ್ರುವರಿಯಲ್ಲಿ ಬೂಮ್ರಾ ಅಗ್ರಸ್ಥಾನ ಕಳೆದುಕೊಂಡಿದ್ದರು. ಇದೀಗ ಮತ್ತೆ ಅವರು ಪ್ರಥಮ ಸ್ಥಾನಕ್ಕೇರಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.

ADVERTISEMENT

ಕಪಿಲ್ ದೇವ್ ನಂತರ ಏಕದಿನ ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ವೇಗದ ಬೌಲರ್‌ ಎಂಬ ಹೆಗ್ಗಳಿಕೆ ಬೂಮ್ರಾ ಅವರದ್ದಾಗಿದೆ. ಟಿ20 ಬ್ಯಾಟಿಂಗ್‌ ವಿಭಾಗದಲ್ಲಿ ಸೂರ್ಯಕುಮಾರ್ ಯಾದವ್ 44 ಸ್ಥಾನಗಳ ಬಡ್ತಿ ಪಡೆದು ಐದನೇ ಸ್ಥಾನ ಗಳಿಸಿದ್ದಾರೆ.

ಪಾಕ್‌ ಹಿಂದಿಕ್ಕಿದ ಭಾರತ: ಏಕದಿನ ಕ್ರಿಕೆಟ್ ತಂಡ ವಿಭಾಗದಲ್ಲಿ ಭಾರತವು ಪಾಕಿಸ್ತಾನವನ್ನು ಹಿಂದಿಕ್ಕಿದೆ.

108 ರೇಟಿಂಗ್ ಅಂಕಗಳನ್ನು ಗಳಿಸಿರುವ ಭಾರತ ತಂಡವು ಮೂರನೇ ಸ್ಥಾನ ಪಡೆದಿದೆ. ಪಾಕಿಸ್ತಾನವು (103 ರೇಟಿಂಗ್‌ ಅಂಕಗಳು) ನಾಲ್ಕನೇ ಸ್ಥಾನದಲ್ಲಿದೆ. ಹೋದ ತಿಂಗಳು ಪಾಕಿಸ್ತಾನ ತಂಡವು ಭಾರತವನ್ನು ಹಿಂದಿಕ್ಕಿತ್ತು.

ನ್ಯೂಜಿಲೆಂಡ್‌ (126) ಮೊದಲ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.