ADVERTISEMENT

IND vs WI| ಕಪಿಲ್ ದೇವ್ ದಾಖಲೆ ಮುರಿದ ಬುಮ್ರಾ: ತವರಿನಲ್ಲಿ ಹೊಸ ರೆಕಾರ್ಡ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2025, 11:13 IST
Last Updated 2 ಅಕ್ಟೋಬರ್ 2025, 11:13 IST
<div class="paragraphs"><p>ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ</p></div>

ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ

   

(ಚಿತ್ರ ಕೃಪೆ: X/@cricketcomau)

ಅಹಮದಾಬಾದ್: ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ (ಗುರುವಾರ) ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರಂಭಗೊಂಡಿದೆ. ಈ ಪಂದ್ಯದಲ್ಲಿ ಭಾರತದ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಜಸ್‌ಪ್ರೀತ್ ಬುಮ್ರಾ ಅವರ ಬೌಲಿಂಗ್ ದಾಳಿಗೆ ನಲುಗಿದ ವಿಂಡೀಸ್ ತನ್ನ ಮೊದಲ ಇನಿಂಗ್ಸ್‌ನಲ್ಲಿ ಕೇವಲ 162 ರನ್‌ಗಳಿಗೆ ಆಲೌಟ್ ಆಗಿದೆ.

ADVERTISEMENT

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್‍ ಪಡೆದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅವರು ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ದಿಗ್ಗಜ ಆಲ್‌ರೌಂಡರ್ ಕಪೀಲ್ ದೇವ್ ಅವರ ದಾಖಲೆ ಮುರಿದರೆ, ಕನ್ನಡಿಗ ಜಾವಗಲ್ ಶ್ರೀನಾಥ್ ಅವರ ಜೊತೆ ಜಂಟಿಯಾಗಿ ದಾಖಲೆಯನ್ನು ಹಂಚಿಕೊಂಡಿದ್ದಾರೆ.

ಬುಮ್ರಾ ವಿಂಡೀಸ್‌ನ ಜಾನ್ ಕ್ಯಾಂಪ್‌ಬೆಲ್, ಜಸ್ಟಿನ್ ಗ್ರೀವ್ಸ್ ಮತ್ತು ಜೋಹಾನ್ ಲೇನ್ ಅವರನ್ನು ಔಟ್ ಮಾಡುವ ಮೂಲಕ ತವರಿನಲ್ಲಿ 50 ವಿಕೆಟ್ ಪೂರೈಸಿದ ಸಾಧನೆ ಮಾಡಿದರು.

ಬುಮ್ರಾ ಅವರು ತವರಿನಲ್ಲಿ 24 ಇನಿಂಗ್ಸ್‌ಗಳಲ್ಲಿ 50 ವಿಕೆಟ್ ಪಡೆಯುವ ಮೂಲಕ ಅತೀ ಕಡಿಮೆ ಇನಿಂಗ್ಸ್ ನಲ್ಲಿ 50 ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡರು. ಆ ಮೂಲಕ ಅವರು ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಸರಿಗಟ್ಟಿದರೆ, ಕಪಿಲ್ ದೇವ್ ಅವರ ದಾಖಲೆಯನ್ನು ಮುರಿದಿದ್ದಾರೆ.

ತವರಿನಲ್ಲಿ ವೇಗವಾಗಿ 50 ವಿಕೆಟ್ ಪಡೆದವರು

ಬುಮ್ರಾ ಹಾಗೂ ಜಾವಗಲ್ ಶ್ರೀನಾಥ್ ತಲಾ 24 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ಕಪಿಲ್ ದೇವ್ 25 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಇಶಾಂತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ಇದ್ದು, ಈ ಇಬ್ಬರು ತಲಾ 27 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.