ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಟ್ವೆಂಟಿ-20 ಟೂರ್ನಿಯ ಎರಡನೇ ಹಂತದ ಪಂದ್ಯಗಳಿಗೆ ಯುಎಇನಲ್ಲಿ ಭರ್ಜರಿ ಚಾಲನೆ ದೊರಕಿದೆ.
ಈ ನಡುವೆ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ, ಮುಂಬೈ ಇಂಡಿಯನ್ಸ್ ಪರ 100 ಪಂದ್ಯಗಳ ಮೈಲಿಗಲ್ಲು ತಲುಪಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಬೂಮ್ರಾ ಈ ಗೌರವಕ್ಕೆ ಭಾಜನರಾಗಿದ್ದಾರೆ.
ಜಸ್‌ಪ್ರೀತ್ ಬೂಮ್ರಾ ಐಪಿಎಲ್‌ನಲ್ಲಿ ಇದುವರೆಗೆ 115 ವಿಕೆಟ್‌ಗಳನ್ನು ಪಡೆದಿದ್ದಾರೆ. 14 ರನ್ ತೆತ್ತು ನಾಲ್ಕು ವಿಕೆಟ್ ಪಡೆದಿರುವುದು ಶ್ರೇಷ್ಠ ಸಾಧನೆಯಾಗಿದೆ.
2013ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ್ದರು. ಅಲ್ಲದೆ ಕಳೆದ ಎಂಟು ವರ್ಷಗಳಲ್ಲಿ ಮುಂಬೈ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.
ಅತ್ತ ವೆಸ್ಟ್‌ಇಂಡೀಸ್‌ನ ಸ್ಟಾರ್ ಆಲ್‌ರೌಂಡರ್ ಡ್ವೇನ್ ಬ್ರಾವೋ, ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್‌ನಲ್ಲಿ 100 ಪಂದ್ಯಗಳನ್ನು ಆಡಿರುವ ಗೌರವಕ್ಕೆ ಭಾಜನರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.