ADVERTISEMENT

‘ಭಾರತ, ಕೀವಿಸ್‌ ಎದುರಿನ ಪಂದ್ಯಗಳು ನಿರ್ಣಾಯಕ’

ಇಂಗ್ಲೆಂಡ್‌ ತಂಡದ ಆಟಗಾರ ಜೋ ರೂಟ್‌ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 20:00 IST
Last Updated 27 ಜೂನ್ 2019, 20:00 IST
ಜೋ ರೂಟ್‌
ಜೋ ರೂಟ್‌   

ಲಂಡನ್‌ (ರಾಯಿಟರ್ಸ್): ‘ಭಾರತ ಮತ್ತು ನ್ಯೂಜಿಲೆಂಡ್‌ ಎದುರಿನ ಪಂದ್ಯಗಳು ನಮ್ಮ ಪಾಲಿಗೆ ಕ್ವಾರ್ಟರ್‌ ಫೈನಲ್‌ ಹೋರಾಟಗಳಿದ್ದಂತೆ. ಈ ಎರಡೂ ಹಣಾಹಣಿಗಳಲ್ಲಿ ಗೆದ್ದು ಸೆಮಿಫೈನಲ್‌ ಪ್ರವೇಶಿಸುವುದು ನಮ್ಮ ಗುರಿ’ ಎಂದು ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್‌ ತಿಳಿಸಿದ್ದಾರೆ.

ಮಂಗಳವಾರ ನಡೆದಿದ್ದ ಆಸ್ಟ್ರೇಲಿಯಾ ಎದುರಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ 64ರನ್‌ಗಳಿಂದ ಸೋತಿತ್ತು. ಹೀಗಾಗಿ ತಂಡದ ನಾಲ್ಕರ ಘಟ್ಟದ ಹಾದಿ ಕಠಿಣವಾಗಿದೆ.

‘ಸೆಮಿಫೈನಲ್‌ ಪ್ರವೇಶಿಸುವ ಸಾಮರ್ಥ್ಯ ನಮಗಿದೆ. ಭಾರತ ಮತ್ತು ನ್ಯೂಜಿಲೆಂಡ್‌ ಎದುರಿನ ಪಂದ್ಯಗಳಲ್ಲಿ ಗೆದ್ದು ನಾಲ್ಕರ ಘಟ್ಟದಲ್ಲಿ ಸ್ಥಾನ ಖಚಿತಪಡಿಸಿಕೊಳ್ಳುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಭಾನುವಾರ ನಡೆಯುವ ಹಣಾಹಣಿಯಲ್ಲಿ ಎಯೊನ್‌ ಮಾರ್ಗನ್‌ ಬಳಗವು ಭಾರತದ ವಿರುದ್ಧ ಆಡಲಿದೆ. ನ್ಯೂಜಿಲೆಂಡ್‌ ಎದುರಿನ ಪಂದ್ಯ ಜುಲೈ ಮೂರರಂದು ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.