ADVERTISEMENT

ಮನೆಗೆ ಕರೆಸಿಕೊಳ್ಳಿ: ಯುದ್ಧದ ಆತಂಕದಲ್ಲಿರುವ IPL ಆಟಗಾರನಿಂದ ಪ್ರಧಾನಿಗೆ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಮಾರ್ಚ್ 2026, 10:40 IST
Last Updated 1 ಮಾರ್ಚ್ 2026, 10:40 IST
<div class="paragraphs"><p>ಸನ್‌ರೈಸರ್ಸ್ ತಂಡದ ಜೊತೆ ಜಾನಿ ಬೈರ್‌ಸ್ಟೋವ್</p></div>

ಸನ್‌ರೈಸರ್ಸ್ ತಂಡದ ಜೊತೆ ಜಾನಿ ಬೈರ್‌ಸ್ಟೋವ್

   

ಮಧ್ಯಪ್ರಾಚ್ಯ ದೇಶಗಳ ನಡುವೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದೆ. ಅದರಲ್ಲೂ, ಅಮೆರಿಕ ಮತ್ತು ಇಸ್ರೇಲ್ ದೇಶಗಳು ಜಂಟಿ ಕಾರ್ಯಾಚರಣೆ ನಡೆಸಿ, ಇರಾನ್‌ನ ಸರ್ವೋಚ್ಚ ನಾಯಕನಾಗಿದ್ದ ಅಯೊತೊಲ್ಲ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿದ ಬಳಿಕ, ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಸದ್ಯ, ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಜಾನಿ ಬೈರ್‌ಸ್ಟೋವ್ ಅವರು ತಮ್ಮನ್ನು ದೇಶಕ್ಕೆ ವಾಪಾಸ್ ಕರೆಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇಂಗ್ಲೆಂಡ್ ಲಯನ್ಸ್ ತಂಡದ ಕೋಚ್ ಆಗಿರುವ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ವಿವಿಧ ಫ್ರಾಂಚೈಸಿಗಳ ‍ಪರ ಆಡಿರುವ ಜಾನಿ ಬೈರ್‌ಸ್ಟೋವ್ ಅವರು ಅಬುಧಾಬಿಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರು ತಮ್ಮನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆದುಕೊಂಡು ಹೋಗುವಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರಿಗೆ ಮನವಿ ಮಾಡಿದ್ದಾರೆ.

ADVERTISEMENT

ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್‌ಮರ್ ಅವರಿಗೆ ಮನವಿ ಮಾಡಿರುವ ಜಾನಿ ಬೈರ್‌ಸ್ಟೋವ್, ‘ನೀವು ನಮ್ಮನ್ನು ಮನೆಗೆ ಕರೆದುಕೊಂಡು ಹೋಗುತ್ತೀರಾ???’ ಎಂದು ಎಕ್ಸ್ ಪೋಸ್ಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಫೆಬ್ರವರಿ 28ರಂದು ನೀಡಿದ ಹೇಳಿಕೆಯಲ್ಲಿ, ‘ತಂಡದ ಆಟಗಾರರು ಮತ್ತು ಸಿಬ್ಬಂದಿಯ ಭದ್ರತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಮಧ್ಯಪ್ರಾಚ್ಯದಲ್ಲಿನ ಪ್ರಸ್ತುತ ಘಟನೆಗಳಿಗೆ ಸಂಬಂಧಿಸಿದಂತೆ ನಾವು ಭದ್ರತಾ ತಜ್ಞರು ಮತ್ತು ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ನೀಡಿರುವ ಸಲಹೆಯನ್ನು ಅನುಸರಿಸುತ್ತೇವೆ’ ಎಂದು ಹೇಳಿಕೆ ನೀಡಿತ್ತು.

ಜಾನಿ ಬೈರ್‌ಸ್ಟೋವ್ ಅವರು, ‘ಎಮಿರೈಟ್ಸ್ ವಿಮಾನ ರದ್ದಾದ ಬಳಿಕ ನಮ್ಮ ಜೊತೆ ಯಾರೂ ಸಂವಹನ ನಡೆಸಿಲ್ಲ, ಸಂಪರ್ಕ ಸಾಧಿಸಿಲು ಪ್ರಯತ್ನಿಸುತ್ತಿದ್ದೇವೆ. ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ’ ಎಂದು ಭಾನುವಾರ ಬೆಳಿಗ್ಗೆ ಪೋಸ್ಟ್ ಹಂಚಿಕೊಂಡಿದ್ದರು.

ಈ ಪೋಸ್ಟ್‌ನ ಬಳಿಕ, ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್‌ಮರ್ ಅವರನ್ನು ಉಲ್ಲೇಖಿಸಿ, ‘ನೀವು ನಮ್ಮನ್ನು ಮನೆಗೆ ಕರೆದುಕೊಂಡು ಹೋಗುತ್ತೀರಾ?’ ಎಂದು ಪ್ರಶ್ನಿಸಿದ್ದಾರೆ.

ಐಪಿಎಲ್‌ 2025ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಆಡಿದ್ದ ಜಾನಿ ಬೈರ್‌ಸ್ಟೋವ್ ಅವರನ್ನು 2026ರ ಐಪಿಎಲ್‌ಗೂ ಮುನ್ನ ನಡೆದಿರುವ ಮಿನಿ ಹರಾಜಿನಲ್ಲಿ ಅವರನ್ನು ಯಾವುದೇ ತಂಡ ಖರೀದಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.